ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ರಾಜೌರಿ ಜಿಲ್ಲೆಗಳ ಪೀರ್ ಪಂಜಾಲ್ ಪ್ರದೇಶದಲ್ಲಿ ರವಿವಾರ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬೆಟ್ಟಗಳ ಇಳಿಜಾರಿನಿಂದ ಕೊಚ್ಚಿಕೊಂಡು ಬಂದ ನೀರು, ಕಲ್ಲು ಮತ್ತು ಮಣ್ಣಿನ ಪ್ರವಾಹಕ್ಕೆ ಮನೆಗಳು ಹಾನಿಗೊಳಗಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಶೋಧ ಕಾರ್ಯ ಮುಂದುವರಿದAತೆ ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಎರಡು ಗಡಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ವ್ಯಾಪಕ ನಾಶನಷ್ಟ ಸಂಭವಿಸಿದ್ದು, ಪೂಂಚ್ ನ ಸುರನ್ಕೋಟ್, ಹವೇಲಿ ಮತ್ತು ಮಂಡಿ ಪ್ರದೇಶಗಳಲ್ಲಿ ಪೊಲೀಸ್, ಸೇನೆ, ಎಸ್ಡಿಆರ್ಎಫ್, ಆಡಳಿತ ಸಿಬ್ಬಂದಿ ಮತ್ತು ಸ್ಥಳೀಯ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.



