ಕೋಲಾರ : ದಿ ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಅನನ್ಯ ಎಂದು ಕವಿ ಡಾ. ಶರಣಪ್ಪ ಗಬ್ಬೂರು ಅಭಿಪ್ರಾಯಪಟ್ಟರು.ಅವರು ನಗರದ ರಡ್ಡಿ ಕಂಪ್ಯೂಟರ್ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಸ್ವರ್ಣಭೂಮಿ ಫೌಂಡೇಶನ್ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತಾನಾಡಿದರು.
ಕಲೆ, ಸಾಹಿತ್ಯ, ಶಿಕ್ಷಣ, ಕೈಗಾರಿಕೆ ಇನ್ನೂ ಅನೇಕ ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟಿದ್ದು ಒಡೆಯರ್. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು ಎಂದರು.
ಅಧ್ಯಕ್ಷ ಬಿ ಶಿವುಕುಮಾರ್ ಮಾತಾನಾಡಿ ಇವರ ಕಾಲದಲ್ಲಿ ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನ ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು ’ ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ. ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪಗಳ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ಕೊಟ್ಟು 1915 ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು ಎಂದರು.
ಇಂಚರ ಸಂಸ್ಥೆಯ ಅಧ್ಯಕ್ಷ ಇಂಚರ ನಾರಾಯಣಸ್ವಾಮಿ ಮಾತಾನಾಡಿ ಮೈಸೂರಿನಲ್ಲಿ ದಾಖಲೆಗಳನ್ನು ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ 270 ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದ್ದರು ಎಂದರು.ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪೋಸ್ಟ್ ನಾರಾಯಣಸ್ವಾಮಿ ಮಾತಾನಾಡಿ ಒಡೆಯರ್ ಬುಡಕಟ್ಟು, ಗಿರಿಜನ, ಅರಣ್ಯವಾಸಿಗಳಿಗೆ ಮೊಟ್ಟ ಮೊದಲು ಶಾಲೆಗಳನ್ನು ತೆರೆಯಲಾಯಿತು.
ಅಸ್ಪೃಶ್ಯರಿಗಾಗಿಯೇ ಹುಸ್ಕೂರು ಹಾಗೂ ಟಿ.ನರಸೀಪುರದಲ್ಲಿ ಶಾಲೆಗಳನ್ನು ಪ್ರಾರಂಭಿಸಲಾಯಿತು. ನಂತರ ಇವರ ಆಡಳಿತಾವಧಿಯಲ್ಲಿ ಸುಮಾರು 800 ಶಾಲೆಗಳನ್ನು ತೆರೆಯಲಾಯಿತು ಎಂದರು.ಕಾರ್ಯಕ್ರಮದಲ್ಲಿ ಕವಿ ಮಕ್ ತಾಳಿಕೋಟೆ, ದಿವಾಕರ್, ರಮೇಶ್, ಲಿಖಿತ್ ಕುಮಾರ್, ಹೇಮಂತ್ವಕುಮಾರ್ ಮುಂತಾದವರು ಉಪಸ್ಥಿತರಿದ್ದರು.