ದೆಹಲಿ: ಲೋಕಸಭಾ ಚುನಾವಣೆ ಸಂಬಂಧ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ದೆಹಲಿಯಲ್ಲಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖಂಡರಾದ ಸೋನಿಯಾಗಾಂಧಿ, ರಾಹುಲ್ಗಾಂಧಿ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.
ಘರ್ ಘರ್ ಗ್ಯಾರಂಟಿ ಎಂಬ ಘೋಷಣೆಯೊಂದಿಗೆ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ.ಪ್ರಮುಖವಾಗಿ 5 ವಲಯಗಳಿಗೆ ಆದ್ಯತೆ ನೀಡಲಾಗಿದ್ದು, ಯುವ ನ್ಯಾಯ, ನಾರಿ ನ್ಯಾಯ, ಕಿಸಾನ್ ನ್ಯಾಯ, ಶ್ರಮಿಕ್ ನ್ಯಾಯ, ಹಿಸ್ಸೇದಾರಿ ನ್ಯಾಯ ಎಂಬುದಾಗಿ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.ಮಹಾಲಕ್ಷ್ಮಿ ಯೋಜನೆಯಡಿ ಬಡ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂಪಾಯಿ ನೀಡುವುದು ಸೇರಿದಂತೆ ಒಟ್ಟು 25 ಗ್ಯಾರಂಟಿಗಳನ್ನು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದೆ.
ಯುವಕರಿಗೆ ವಾರ್ಷಿಕ 1ಲಕ್ಷ ರೂ. ಶಿಷ್ಯ ವೇತನ, ಮನರೇಗ ದೈನಿಕ ಕೂಲಿ 400ಗೆ ಹೆಚ್ಚಳ. ರೈತರ ಸಾಲ ಮನ್ನ ಜತೆಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗುವುದು. ಜಾತಿ ಗಣತಿ ಮಾಡುವ ಬಗ್ಗೆ ಗ್ಯಾರಂಟಿ ನೀಡಲಾಗಿದೆ. ವೃದ್ಯಾಪ್ಯ, ವಿದವಾ ವೇತನ, 1000 ರೂ.ಗೆ ಹೆಚ್ಚಿಸಲಾಗುವುದು. ಸಾರ್ವಜನಿಕ ಸಾರಿಗೆಯಲ್ಲಿ ವೃದ್ಧರಿಗೆ ವಿನಾಯಿತಿ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.