ನವದೆಹಲಿ: ಜೂನ್ 21 ರಂದು ನಡೆಯಲಿರುವ ಓಇಇಖಿ-Uಉ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ಇಂದು ಎತ್ತಿಹಿಡಿದಿದೆ. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಂ ಅಡಿಯಲ್ಲಿ ಟೆಲಿಗ್ರಾಂನAತಹ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರಕ್ಕೆ ಪೂರ್ಣ ಅಧಿಕಾರವಿದೆ ಎಂದು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರ ರಜಾಕಾಲದ ಪೀಠವು ತೀರ್ಪು ನೀಡಿದೆ. ‘ಸರ್ಕಾರದ ಆದೇಶವು ಸೂಕ್ತ ಆಧಾರಗಳಿಂದ ಕೂಡಿದೆ. ಕಾನೂನಿನ ಚೌಕಟ್ಟಿನಲ್ಲಿ ಇಂತಹ ಕ್ರಮಗಳನ್ನು ಕೈಗೊಳ್ಳುವುದು ಅಸಮಂಜಸವಲ್ಲ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.150 ಮಿಲಿಯನ್ ಬಳಕೆದಾರರ ಹಕ್ಕು:ಇದಕ್ಕೂ ಮುನ್ನ ಗುರುವಾರದ ವಿಚಾರಣೆಯ ಸಂದರ್ಭದಲ್ಲಿ, ‘ಕೆಲವೇ ಕೆಲವು ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂಬ ಕಾರಣಕ್ಕೆ, ಭಾರತದಲ್ಲಿರುವ ಬರೋಬ್ಬರಿ 150 ಮಿಲಿಯನ್ (15 ಕೋಟಿ) ಟೆಲಿಗ್ರಾಂ ಬಳಕೆದಾರರ ಹಕ್ಕನ್ನು ಹೇಗೆ ಕಸಿದುಕೊಳ್ಳಲು ಸಾಧ್ಯ?’ ಎಂದು ನ್ಯಾಯಾಲಯವು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಟೆಲಿಗ್ರಾಂ ಪರ ಹಿರಿಯ ವಕೀಲ ಧ್ರುವ್ ಮೆಹ್ತಾ ಹಾಗೂ ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುದೀರ್ಘ ವಾದ-ಪ್ರತಿವಾದ ಮಂಡಿಸಿದ ನಂತರ ನ್ಯಾಯಾಲಯವು ತೀರ್ಪನ್ನು ಕಾಯ್ದಿರಿಸಿತ್ತು.ಟೆಲಿಗ್ರಾಂ ನಿರ್ಬಂಧಕ್ಕೆ ಕಾರಣವೇನು?
ಮೇ 3 ರಂದು ನಡೆದಿದ್ದ ವೈದ್ಯಕೀಯ ಪ್ರವೇಶಾತಿ ಪರೀಕ್ಷೆಯಾದ ಓಇಇಖಿ-Uಉ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ,
ನೀಟ್ ಪರೀಕ್ಷೆ-ಜೂ.22ರವರೆಗೆ ಟೆಲಿಗ್ರಾಂ ಆಪ್ ತಾತ್ಕಾಲಿಕ ನಿಷೇಧ ಕೇಂದ್ರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್



