ಕೋಲಾರ: ನಗರದ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಗುರುವಾರ ಸುಮಾರು 30 ಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರಿಗೆ ಸರಕಾರದಿಂದ ಬಾಣಂತಿಯರಿಗೆ ಕೊಡುವ ಹೆರಿಗೆ ಸೌಲಭ್ಯದ ಬಾಂಡ್‍ಗಳನ್ನು ವಿತರಿಸಲಾಯಿತು.
ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ ಸರ್ಕಾರವು ಕಟ್ಟಡ ಕಾರ್ಮಿಕರು ಹಾಗೂ ಇತರೆ ವೃತ್ತಿಯನ್ನು ಮಾಡುವ ಕಾರ್ಮಿಕರಿಗೆ ಇಲಾಖೆಯಿಂದ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು 2009ರಲ್ಲಿ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕಲ್ಯಾಣಕ್ಕೆ 500 ಕೋಟಿ ಅನುದಾನ ಮೀಸಲಿಟ್ಟಿದ್ದರು.
ಅಂದಿನಿಂದ ಈ ಯೋಜನೆಯ ಸೌಲಭ್ಯ ಕಾರ್ಮಿಕರಿಗೆ ಲಭಿಸುತ್ತದೆ ಬಳಸಿಕೊಂಡು ಉತ್ತಮ ಜೀವನ ನಿರ್ವಹಣೆ ನಡೆಸಲು ಸಾಧ್ಯ ಎಂದರು. ಯಾವುದೇ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಅಥವಾ ಇತರೆ ನಿರ್ಮಾಣ ಕಾರ್ಮಿಕರಾಗಿದ್ದರೆ, ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವ ಮೂಲಕ ಬದುಕನ್ನು ಹಸನಾಗಿಸಿಕೊಳ್ಳಬಹುದು ಕಾರ್ಮಿಕ ಕಲ್ಯಾಣದ ಸಂಕಲ್ಪ ತೊಟ್ಟಿರುವ ಕಾರ್ಮಿಕ ಇಲಾಖೆಯು ಹಲವು ಯೋಜನೆಗಳನ್ನು ಜಾರಿ ಮಾಡುತ್ತಿದೆ.
ಆದರೆ ಈ ಯೋಜನೆಗಳ ಸದುಪಯೋಗ ಪಡೆಯಲು ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು ನಮ್ಮ ಸಂಘದ ವತಿಯಿಂದ ನೋಂದಣಿ ಮಾಡಿಸಲಾಗುವುದು ಎಂದರು. ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ಮುರಳಿ ತಾಲೂಕು ಅಧ್ಯಕ್ಷ ಕೊಡಿಯಪ್ಪ, ಮುಖಂಡರಾದ ನಾಗರಾಜ್, ಅನಿಲ್ ಕುಮಾರ್, ನಾರಾಯಣಸ್ವಾಮಿ, ಜಯಮ್ಮ ಮುಂತಾದವರು ಇದ್ದರು.
Leave a Review