ನೆಲಮಂಗಲ: ಬದುಕಿರುವ ರೈತರನ್ನು ಮರಣ ಹೊಂದಿದ್ದಾರೆAದು ದಾಖಲಿಸಿ ಪೌತಿ ಖಾತೆ ಮಾಡಿರುವ ಪ್ರಕರಣಗಳ ವಿರುದ್ಧ ಸಂಬAಧಪಟ್ಟ ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಕಿಸಾನ್ ಸಂಘಟನೆಯ ನೇತೃತ್ವದಲ್ಲಿ ರೈತರು ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು ಹಾಗೂ ಸಂಘಟನೆಯ ಪದಾಧಿಕಾರಿಗಳು ಅಧಿಕಾರಿಗಳ ಕಾರ್ಯವೈಖರಿಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಅವರಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಕಿಸಾನ್ ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಭೀಮಯ್ಯ ಅವರು, ಬದುಕಿರುವ ರೈತರನ್ನು ಮರಣ ಹೊಂದಿದ್ದಾರೆAದು ದಾಖಲಾತಿ ಸೃಷ್ಟಿಸಿ ಪೌತಿ ಖಾತೆ ಮಾಡಿರುವುದು ಗಂಭೀರ ಕರ್ತವ್ಯಲೋಪವಾಗಿದ್ದು, ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ತಾಲೂಕಿನ ಅಮಾನಿಕೆರೆ ಸೇರಿದಂತೆ ಹಲವು ಕೆರೆಗಳ ಜಾಗಗಳು ಅತಿಕ್ರಮಣಕ್ಕೆ ಒಳಗಾಗಿದ್ದು, ಒತ್ತುವರಿಯನ್ನು ಕೂಡಲೇ ತೆರವುಗೊಳಿಸಬೇಕು. ಕೆರೆಗಳಲ್ಲಿ ಅಕ್ರಮವಾಗಿ ಮಣ್ಣು ಸಾಗಣೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಗುಂಡುತೋಪು, ಸ್ಮಶಾನ, ಹಳ್ಳ, ಖರಾಬು ಜಮೀನು ಹಾಗೂ ಇತರೆ ಸಾರ್ವಜನಿಕ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿದರು.ಸರ್ಕಾರಿ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟಾಗುತ್ತಿದೆ. ಇದನ್ನು ತಡೆಗಟ್ಟಲು ಕಚೇರಿಗಳಲ್ಲಿ ಸಂದರ್ಶಕರ ವಹಿಯನ್ನು ಕಡ್ಡಾಯವಾಗಿ ನಿರ್ವಹಿಸಬೇಕು. ಅಲ್ಲದೆ, ಅಧಿಕಾರಿಗಳು ಸರ್ಕಾರದ ನಿರ್ದೇಶನದಂತೆ ಕಚೇರಿಯಲ್ಲಿ ನಿಯಮಿತವಾಗಿ ಹಾಜರಿದ್ದು ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.ಪೋಡಿ, ಮ್ಯೂಟೇಶನ್ ಹಾಗೂ ದರ ಖಾಸ್ತು ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿರು ವುದರಿಂದ ರೈತರು ಸಂಕಷ್ಟ ಅನುಭವಿಸುತ್ತಿ ದ್ದಾರೆ. ಬಾಕಿ ಉಳಿದಿರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಪ್ರತಿಭಟನಾಕಾರರು ತಾಲೂಕು ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರವನ್ನು ಇಟ್ಟು ಶಾಂತಿಯುತ ಧರಣಿ ನಡೆಸಿದರು. ತಹಸೀಲ್ದಾರ್ ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಪಟ್ಟು ಹಿಡಿದ ರೈತರು ಕೆಲಕಾಲ ಧರಣಿ ನಡೆಸಿದರು.
ಬಳಿಕ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಮಲ್ಲೇಶ್ ಬಿರಪ್ಪ ಪೂಜಾರ್ ಅವರು ಮನವಿ ಪತ್ರ ಸ್ವೀಕರಿಸಿ, ರೈತರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಬAಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ತಹಸೀಲ್ದಾರ್ ಅವರ ಭರವಸೆಯ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.ಪ್ರತಿಭಟನೆಯಲ್ಲಿ ರಾಷ್ಟ್ರೀಯ ಕಿಸಾನ್ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಯರಾಮಯ್ಯ, ಪ್ರಧಾನ ಕಾರ್ಯದರ್ಶಿ ಗಿರೀಶ್, ಯುವ ಘಟಕದ ಅಧ್ಯಕ್ಷ ಪ್ರಶಾಂತ್, ರಾಷ್ಟ್ರೀಯ ಕಾರ್ಯದರ್ಶಿ ಚಂದ್ರಶೇಖರ್, ರಾಜ್ಯ ಕಾರ್ಯಾಧ್ಯಕ್ಷ ಆನಂದ್, ಕೇಶವಮೂರ್ತಿ, ಸಂಘಟನಾ ಕಾರ್ಯದರ್ಶಿ ಮಂಜುನಾಥ್, ಶಿವು, ನಾಗರಾಜು, ಗಣೇಶರಾವ್, ಭಾಗ್ಯಮ್ಮ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ತಾಲೂಕಿನ ನೂರಾರು ರೈತರು ಭಾಗವಹಿಸಿದ್ದರು.
ಬದುಕಿರುವ ರೈತನನ್ನು ಸತ್ತನೆಂದು ಪೌತಿ ಖಾತೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ರಾಷ್ಟ್ರೀಯ ಕಿಸಾನ್ ಸಂಘದ ಪ್ರತಿಭಟನೆ; ಕೆರೆ ಒತ್ತುವರಿ ತೆರವು, ಭ್ರಷ್ಟಾಚಾರ ನಿಯಂತ್ರಣಕ್ಕೆ ಒತ್ತಾಯ



