ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ಬಾಲರಾಮನ ಪ್ರಾಣಪ್ರತಿಷ್ಠಾಪನಾದ ಅಂಗವಾಗಿ ಸರ್ಕಾರಿ ರಜೆ ಘೋಷಿಸಬೇಕು ಎಂದು ಕನ್ನಡಪರ ಸಂಘಟನೆಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.
ಈ ಸಂಬಂಧ ಇನ್ನು ಸರ್ವಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಮನವಿ ಪತ್ರ ಸಲ್ಲಿಸಿವೆ.ಈಗಾಗಲೇ ಹಲವು ರಾಜ್ಯಗಳಲ್ಲಿ ಸರ್ಕಾರಿ ರಜೆ ಘೋಷಣೆಯಾಗಿದ್ದು, ಕೇಂದ್ರ ಸರ್ಕಾರವು ಸಹ ಅರ್ಧ ದಿನ ರಜೆ ಘೋಷಣೆ ಮಾಡಿದ್ದು, ಹಾಗಾಗಿ ರಾಜ್ಯಸರ್ಕಾರವು ಸಹ ರಜೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಹ ರಾಜ್ಯ ಸರ್ಕಾರ ಸರ್ಕಾರಿ ರಜೆ ಘೋಷಣೆ ಮಾಡಲು ಪತ್ರ ಬರೆದು ಒತ್ತಾಯಿಸಿದ್ದಾರೆ.ಇದೇ ಸಂದರ್ಭದಲ್ಲಿ ಅವರು, ರಾಮಮಂದಿರ ಉದ್ಘಾಟನೆ ಮತ್ತು ಬಾಲರಾಮನ ಪ್ರಾಣಪ್ರತಿಷ್ಠಾಪನೆ ಸಂಬಂಧ ಗೊಂದಲದಲ್ಲಿದ್ದು, ಆಹ್ವಾನವನ್ನು ತಿರಸ್ಕರಿಸಿ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.