ಚಿತ್ರದುರ್ಗ: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಅಬ್ಬಿನ ಹೊಳಲು ಗ್ರಾಮದ ಬಳಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಸ್ಥಳಕ್ಕೆ ರಾಜ್ಯದ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ. ಬಳಿಕ ಇಲ್ಲಿನ ರೈತರೊಂದಿಗೆ ಸಮಾಲೋಚನೆ ನಡೆಸಿದರು.
ರೈತರು ಮಾತನಾಡಿ, ಪರಿಹಾರ ವಿಚಾರದಲ್ಲಿ ಅಬ್ಬಿನಹೊಳಲು, ನರಸೀಪುರ ಮತ್ತಿತರ ಗ್ರಾಮದ ರೈತರಿಗೆ ಅನ್ಯಾಯವಾಗಿದೆ,
ಕೆಲ ರೈತರಿಗೆ 40 ಲಕ್ಷ ಪರಿಹಾರ ನೀಡಿದರೆ, ನಮಗೆ ಮಾತ್ರ ಕೇವಲ 4 ಲಕ್ಷ ನೀಡಿದ್ದಾರೆ, ಒದು ತೀರಾ ತಾರತಮ್ಯ ಮತ್ತು ಅನ್ಯಾಯ . ನಮಗೆ ಏಕರೂಪವಾಗಿ ಕನಿಷ್ಟ 40 ಲಕ್ಷ ಪರಿಹಾರ ನೀಡುವಂತೆ ಮನವಿ ಮಾಡಿದರು.ವಿ.ಜೆ.ಎನ್.ಎಲ್. ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ ಮಾತನಾಡಿ, ಅಬ್ಬಿನಹೊಳಲು ಬಳಿಯ 33 ರೈತರ ಪೈಕಿ 23 ರೈತರು ಪರಿಹಾರ ಮೊತ್ತ ಹೆಚ್ಚಳ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ರೈತರಿಗೆ ಅವಾರ್ಡ್ ಮೊತ್ತವನ್ನು ನ್ಯಾಯಾಲಯಕ್ಕೆ ಜಮಾ ಮಾಡಲಾಗಿದೆ. ಇಲ್ಲಿನ 1.7 ಞm ಕಾಮಗಾರಿ ಪೂರ್ಣಗೊಳಿಸಲು ಅನುವು ಮಾಡಿ ಕೊಟ್ಟರೆ ತ್ವರಿತವಾಗಿ ಪೂರ್ಣಗೊಳಿಸಿ ಅಕ್ಟೋಬರ್ ವೇಳೆಗೆ ಪ್ರಾಯೋಗಿಕ ವಾಗಿ ನೀರು ಹರಿಸುವ ಪರೀಕ್ಷೆ ನಡೆಸಲಾಗುವುದು
ಎಂದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ 21 ಸಾವಿರ ಕೋಟಿ ಮೊತ್ತದ ಬೃಹತ್ ಯೋಜನೆ ಹಾಗೂ ಲಕ್ಷಾಂತರ ರೈತರ ಆಶಾಕಿರಣವಾದ ಈ ಭದ್ರಾ ಮೇಲ್ದಂಡೆ ಯೋಜನೆಯು ಕೆಲವೇ ಕೆಲವು ರೈತರಿಂದ ನೆನೆಗುದಿಗೆ ಬೀಳುವಿದು ಸರಿಯಲ್ಲ. ರೈತರಿಗೆ ಆಗಿರುವ ತಾರತಮ್ಯದ ಬಗ್ಗೆ ನನ್ನ ಗಮನಕ್ಕೆ ಬಂದಿದೆ.ಕಾನೂನು ಚೌಕಟ್ಟಿನಲ್ಲಿ ರೈತರ ಸಮಸ್ಯೆ ಪರಿಹರಿಸಲಾಗುದು.
ಕಾಲ ಕಳೆದಂತೆ ಯೋಜನಾ ವೆಚ್ಚ ಹೆಚ್ಚಾಗುತ್ತದೆ. ಹೀಗಾಗಿ ಶೀಘ್ರ ಇತ್ಯರ್ಥ ಮಾಡುವುದು ಸೂಕ್ತ. ಚುನಾವಣೆ ಘೋಷಣೆಗೂ ಮುನ್ನವೇ ಬೆಂಗಳೂರಿನಲ್ಲಿ ಸಂಬಂಧಿಸಿದ ಎಲ್ಲ ಶಾಸಕರು,ರೈತರು,ವಿ.ಜೆ.ಎನ್. ಎಲ್ ಅಧಿಕಾರಿಗಳು ಕಂದಾಯ ಇಲಾಖೆ ಅಧಿಕಾರಿಗ ಳೊಂದೊಗೆ ಸಭೆ ನಡೆಸಿ. ಒಂದು ಒಳ್ಳೆಯ ತೀರ್ಮಾನ ವನ್ನು ಮಾಡೋಣ. ಹೀಗಾಗಿ ರೈತರು ಹಠ ಬಿಟ್ಟು. ಕೂಡಲೇ ಕಾಮಗಾರಿ ನಡೆಸಲು ಅನುವು ಮಾಡಿಕೊಡ ಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಾಂಕಿಕ ಖಾತೆ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್, ಶಾಸಕರಾದ ಟಿ.ರಘುಮೂರ್ತಿ,ಬಿಜಿ ಗೋವಿಂದಪ್ಪ, ಎನ್.ವೈ. ಗೋಪಾಲಕೃಷ್ಣ, ಚಂದ್ರಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ಶ್ರೀನಿವಾಸ್, ಟಿ.ಬಿ.ಜಯಚಂದ್ರ,ಸುರೇಶ್,ಆನಂದ್, ತಮ್ಮಯ್ಯ,ರಾಜೇಗೌಡ, ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಅಭಿಯಂತರ ಶಿವಪ್ರಕಾಶ್, ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್,ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತ ರಿದ್ದರು.