ಯಾದಗಿರಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಐವರು ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ಬಳಿ ಸಂಭವಿಸಿದೆ.
ಅಪಘಾತದಲ್ಲಿ 13 ಜನರಿಗೆ ಗಾಯಗಳಾಗಿದ್ದು, ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮುನೀರ್(40), ನಯಾಮತ್ (40), ಮುದಶಿರ್ (12), ರಮೀಜಾ ಬೇಗಂ (50), ಸುಮ್ಮಿ (12) ಮೃತ ದುರ್ದೈವಿಗಳು. ಘಟನೆಯಲ್ಲಿ ಓರ್ವ ಬಾಲಕಿ, ಓರ್ವ ಬಾಲಕ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ಭಕ್ತರು ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯವರಾಗಿದ್ದು, ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ಆಗಮಿಸುತ್ತಿದ್ದರು ಎನ್ನಲಾಗಿದೆ.ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿದ್ದಾರೆ.
Leave a Review