ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.ಪೊಗಲ್ ಹಬ್ಬದ ಸ್ಪೆಷಲ್ ಆಗಿ ಧನುಷ್-ಶಿವಣ್ಣ ಸಿನಿಮಾ ತೆರೆಗೆ ಬರಲಿದೆ. 12ರಂದು ‘ಕ್ಯಾಪ್ಟನ್ ಮಿಲ್ಲರ್’ ವಿಶ್ವದಾದ್ಯಂತ ತೆರೆ ಕಾಣಲಿದೆ.
ಈ ಚಿತ್ರವನ್ನು ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದಾರೆ. ಧನುಷ್ ಜೋಡಿಯಾಗಿ ಪ್ರಿಯಾಂಕಾ ಮೋಹನನ್ ನಟಿಸಿದ್ದಾರೆ. ಇದು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ತೆರೆದುಕೊಳ್ಳುವ ಕಥೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ರಿಲೀಸ್ ಆಗಿರೋ ಟೀಸರ್ ಸಿನಿಪ್ರಿಯರಿಗೆ ಕಿಕ್ ಕೊಟ್ಟಿದೆ. ಧನುಷ್ ಉದ್ದ ಕೂದಲು, ಗಡ್ಡ ಮೀಸೆ ಬಿಟ್ಟು ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಾರೆ. ಹಾಗೇ ಶಿವರಾಜ್ಕುಮಾರ್ ಕೂಡ ಕುದುರೆ ಏರಿ ಬರುವ ಸನ್ನಿವೇಶ ಅವರ ಅಭಿಮಾನಿಗಳಿಗೆ ಥ್ರಿಲ್ ಹೆಚ್ಚಿಸಿದೆ.
ಸಿನಿಮಾಗೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಜಿವಿ ಪ್ರಕಾಶ್ ಈ ಸಿನಿಮಾಗೆ ಹಿನ್ನೆಲೆ ಸಂಗೀತ ಹಾಗೂ ಟ್ಯೂನ್ಗಳನ್ನು ಕಂಪೋಸ್ ಮಾಡಿದ್ದಾರೆ.