ಕೋಲಾರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿಂದು ನಡೆದ ಜಿಲ್ಲಾಮಟ್ಟದ ಕಲಾಪ್ರತಿಬೋತ್ಸವದ ಬಾಲಪ್ರತಿಭೆ ವಿಭಾಗ ಚಿತ್ರಕಲೆ ಸ್ಪರ್ಧೆಯಲ್ಲಿ ನರಸಾಪುರ ಸಿ.ಆರ್.ಸಿ ವ್ಯಾಪ್ತಿಯ ಬೈರಸಂದ್ರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ೫ನೇ ತರಗತಿ ವಿದ್ಯಾರ್ಥಿ ಧ್ಯಾನ್ಪ್ರಕಾಶ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಗರದ ಟಿ.ಚನ್ನಯ್ಯ ರಂಗಮAದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಎನ್.ವಿಜಯಲಕ್ಷಿö್ಮ ಬಹುಮಾನ ವಿತರಿಸಿದರು. ಬಹುಮಾನ ಪಡೆದ ಧ್ಯಾನ್ಪ್ರಕಾಶ್ರನ್ನು ಶಾಲೆಯ ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮದ ಮುಖಂಡರು,ಹಳೇ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.



