ಹುಬ್ಬಳ್ಳಿ: ಆಶಾ ಡಯಾಬಿಟಿಕ್ ಟ್ರಸ್ಟ್ ಮತ್ತು ಸಂಶೋಧನಾ ಪ್ರತಿಷ್ಠಾನ ವತಿಯಿಂದ ಡಯಾ ಬಿಟಿಕ್ ಜಾಗೃತಿ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಅಕ್ಟೋಬರ್ ೧೬ ರಂದು ಬೆಳಿಗ್ಗೆ ೧೦.೩೦ ಕ್ಕೆ ಇಲ್ಲಿನ ವಿದ್ಯಾನಗರದ ಕೆಎಲ್ಇ ಟೆಕ್ನಾಲಜಿಕಲ್ ಯುನಿವರ್ಸಿಟಿಯ ಬಯೋಟೆಕ್ನಾಲಜಿ ಹಾಲ್’ನಲ್ಲಿ ಆಯೋಜಿಸಲಾಗಿದೆ ಎಂದು ಖ್ಯಾತ ಡಯಾಬಿಟಿಕ್ ವೈದ್ಯ ಡಾ.ಜಿ.ಬಿ.ಸತ್ತೂರ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ವಿಶ್ವದಲ್ಲಿಯೇ ಹೆಚ್ಚು ಮಧುಮೇಹಿಗಳನ್ನು ಹೊಂದಿದೆ. ೭೫ ಮಿಲಿಯನ್ ಗಿಂತಲೂ ಹೆಚ್ಚು ವಯಸ್ಥರು ಜಾಗೃತಿ ಮೂಡಿಸಲು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಕರೆ ನೀಡುತ್ತಿದ್ದಾರೆ. ಆದರೂ ಸಹ ಮಧುಮೇಹಿಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು.
ಈಗಾಗಲೇ ಆಶಾ ಡಯಾಬಿಟಿಕ್ ಮತ್ತು ಸಂಶೋಧನಾ ಪ್ರತಿಷ್ಠಾನ ೨೦ ವರ್ಷಗಳಿಂದ ಉತ್ತರ ಕರ್ನಾಟಕ ಭಾಗದ ಜನರಿಗೆ ಮಧುಮೇಹದ ಕುರಿತು ಜಾಗೃತಿ, ಚಿಕಿತ್ಸೆ ಕುರಿತು ಮನವರಿಕೆ ಮಾಡಿಕೊಡುವ ಕೆಲಸ ಮಾಡುತ್ತಿದೆ. ಅದರಂತೆ ಇದೀಗ ಯುವಜನರಲ್ಲಿ ಹೆಚ್ಚಾಗಿ ಕಂಡು ಬರುವ ಮಧುಮೇಹ ಮತ್ತು ಅಧಿಕ ರಕ್ತದೊ
ತ್ತಡದ ಕುರಿತು ಜಾಗೃತಿ ಮೂಡಿಸಲು ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.