ಬೆಂಗಳೂರು: ಬಿಗ್ ಬಾಸ್ ಮನೆಗೆ ಬಿಗ ಜಡಿದ ವಿಚಾರದಲ್ಲಿ ಡಿಸಿಎಂ ಡಿಕೆಶಿ ಸಾಫ್ಟ್ ಕಾರ್ನರ್ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ, ಮಾಲಿನ್ಯ ಇಲಾಖೆಯ ಜೊತೆ ಮಾತನಾಡಿದ್ದೇನೆ. ಏನಾದರೂ ಉಲ್ಲಂಘನೆಯಾಗಿದ್ದರೆ ಸರಿಪಡಿಸಿ ಕೊಳ್ಳಲು ಅವಕಾಶ ಕೊಡಿ ಎಂದು ಸೂಚಿಸಿರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಗ್ಬಾಸ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದ ವಿಚಾರಕ್ಕೆ ಸಂಬAಧಿಸಿದAತೆ ಪ್ರತಿಕ್ರಿಯಿಸಿದ ಅವರು, ನಾವು ವಿಚಾರಣೆ ನಡೆಸಿದ್ದೇನೆ. ಜನರಿಗೆ ಮನರಂಜನೆ ನೀಡಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿರುತ್ತಾರೆ. ಏನಾದ್ರೂ ತಪ್ಪಾಗಿದ್ದರೂ ಅವಕಾಶ ಕೊಡಲು ಹೇಳಿದ್ದೇನೆ ಎಂದು ತಿಳಿಸಿದರು.
ಜೆಡಿಎಸ್ನವರ ನಟ್ಟು ಬೋಲ್ಟ್ ಆರೋಪಕ್ಕೆ ಮಾತನಾಡಿದ ಅವರು, ಅವರಿಗೆ ಶಕ್ತಿ ಬೇಕು ಎಂದಾಗ ನನ್ನ ಹೆಸರು ತೆಗೆದುಕೊಳ್ಳುತ್ತಾರೆ. ಜಾಲಿವುಡ್ ಸ್ಟುಡಿಯೋ ಉದ್ಘಾಟನೆಯನ್ನು ನಾನೇ ಮಾಡಿದ್ದೇನೆ. ಕುಮಾರಸ್ವಾಮಿಯಾದ್ರೂ ಆರೋಪ ಮಾಡಲಿ. ಮೇಲೆ ಇರುವವರನ್ನು ಕರಕೊಂಡು ಬಂದರೂ ನಾನು ತಲೆಕೆಡೆಸಿಕೊಳ್ಳುವುದಿಲ್ಲ ಎಂದರು.