ಬೆಂಗಳೂರು: ಸತತವಾಗಿ ಆರು ವರ್ಷಗಳ ಕಾಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ನಡೆಸಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಪಕ್ಷದ ಶಾಸಕರಿಗೆ ಇಂದು ರಾತ್ರಿ ಭೋಜನಕೂಟ ಏರ್ಪಡಿಸಿದ್ದಾರೆ.
ಬೆಂಗಳೂರು ನಗರದ ಖಾಸಗಿ ಹೋಟೆಲ್ನಲ್ಲಿ ವಿಧಾನಪರಿಷತ್ ಹಾಗೂ ವಿಧಾನಸಭೆ ಸದಸ್ಯರಿಗಾಗಿ ಭೋಜನಕೂಟ ಏರ್ಪಡಿಸಲಾಗಿದೆ. ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತಂದು ಸಮಪರ್ಕವಾಗಿ ನಡೆಸಿರುವ ಹಿನ್ನೆಲೆಯಲ್ಲಿ ಈ ಭೋಜನಕೂಟ ಏರ್ಪಡಿಸಿರುವುದಾಗಿ ತಿಳಿಸಿದ ಡಿ.ಕೆ.ಶಿವಕುಮಾರ್ ಅವರು, ಇಂದು ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ಭೋಜನಕೂಟ ಏರ್ಪಡಿಸಲಾಗಿದೆ. ಮತ್ತೊಂದು ದಿನ ಪಕ್ಷದ ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಅಧ್ಯಕ್ಷರು ಪದಾಧಿಕಾರಿಗಳಿಗೆ ಭೋಜನಕೂಟ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.
ಆರು ವರ್ಷ ಕೆಪಿಸಿಸಿ ಅಧ್ಯಕ್ಷರಾದ ಹಿನ್ನೆಲೆ ಪಕ್ಷದ ಶಾಸಕರಿಗೆ ಭೋಜನ ಕೂಟ



