ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ದ ಅಧ್ಯಕ್ಷರಾದ ಶ್ರೀ ಎಂ. ಜಿ. ರಾಮಮೂರ್ತಿ ಹಾಗೂ ಜಂಟಿ ಕಾರ್ಯದರ್ಶಿ ರಮೇಶ್ ಯಾದವ್ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಿ ಜಮ್ಮು ಕಾಶ್ಮೀರದಲ್ಲಿ ಕನ್ನಡ ಸಿನೆಮಾಗಳ ಚಿತ್ರಕರಣದ ಬಗ್ಗೆ ಮಾತನಾಡಲಾಗಿ, ಓಮರ್ ಅಬ್ದುಲ್ಲಾ ಅವರು ಎಲ್ಲಾ ರೀತಿಯ ವ್ಯವಸ್ಥೆ ಹಾಗೂ ಭದ್ರತೆ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಈ ಸಭೆಯಲ್ಲಿ ಕಲಾವಿದರ ಸಂಘದಿAದ ರಾಕ್ ಲೈನ್ ವೆಂಕಟೇಶ್ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಸುಂದರ್ ರಾಜ್ ಭಾಗವಹಿಸಿದ್ದರು. ಈ ಬಗ್ಗೆ ಕನ್ನಡ ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ರಾಮಮೂರ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.



