ಗದಗ: ಕರ್ನಾಟಕ ರಾಜ್ಯ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಜುಲೈ ತಿಂಗಳಲ್ಲಿ ರಾಜ್ಯ ಸಮಾವೇಶ ಆಯೋಜನೆಗೆ ರಾಜ್ಯ ಕಾರ್ಯಕಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದ್ದು, ಇದಕ್ಕೆ ಸಹಾಯ, ಸಹಕಾರ ನೀಡುವ ಮೂಲಕ ಸಮಾವೇಶ ಯಶಸ್ವಿಗೆ ಸಹಕರಿಸಬೇಕು ಎಂದು ಕಾರ್ಯನಿರತ ಸಂಪಾದಕರ ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥ ಅಬ್ಬಿಗೇರಿ ಮನವಿ ಮಾಡಿದರು.
ಸಮಾವೇಶದ ಕುರಿತು ಸಚಿವ ಎಚ್.ಕೆ. ಪಾಟೀಲರನ್ನು ಜಿಲ್ಲಾ ಸಂಪಾದಕರ ಸಂಘದ ನಿಯೋಗದೊಂದಿಗೆ ಭೇಟಿ ಮಾಡಿ ಈ ಕುರಿತು ಸಚಿವರಿಗೆ ಮನವಿ ಮಾಡಿದರು.ರಾಜ್ಯದ ಎಲ್ಲಾ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರು ಸಮಾವೇಶದಲ್ಲಿ ಭಾಗವಹಿಸಲಿದ್ದು, ಈ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ತಾವು ಮುಖ್ಯಮಂತ್ರಿಗಳ ದಿನಾಂಕ ನಿಗದಿಪಡಿಸಿ ಕೊಡಲು ಈ ವೇಳೆ ಸಚಿವರಿಗೆ ಮನವಿ ಮಾಡಲಾಯಿತು.
ಈ ವೇಳೆ ಪ್ರತಿಕ್ರಿಯಿಸಿದ ಸಚಿವ ಎಚ್.ಕೆ. ಪಾಟೀಲ್ ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ದಿನಾಂಕ ನಿಗದಿ ಮಾಡಲಾಗುವುದು. ಜಿಲ್ಲೆಯಲ್ಲಿ ನಡೆಯುತ್ತಿರುವ ಸಮಾವೇಶ ಅಚ್ಚುಕಟ್ಟಾಗಿ ನಡೆಸಬೇಕು. ಇದಕ್ಕೆ ನನ್ನ ಸಹಕಾರ ಸಂಪೂರ್ಣ ಇದೆ ಎಂದು ಹೇಳಿದರು.ಈ ವೇಳೆ ಸಂಘದ ಜಿಲ್ಲಾ ಉಪಾಧ್ಯಕ್ಷ ಎನ್.ಆರ್. ಭಾಂಡಗೆ, ಕಾರ್ಯದರ್ಶಿ ದೇವಪ್ಪ ಲಿಂಗದಾಳ, ಅಜಿತ್ ಹೊಂಬಾಳಿ, ಜಗದೀಶ್ ಪೂಜಾರ್ ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಶಿದ್ಧಲಿಂಗೇಶ್ ಪಾಟೀಲ್, ಕಾಂಗ್ರೆಸ್ ಮುಖಂಡರಾದ ಬಿ.ಬಿ. ಅಸೂಟಿ, ಬರಕತ್ ಅಲಿ ಮುಲ್ಲಾ, ಅಶೋಕ ಮಂದಾಲಿ, ಉಮರಫಾರೂಕ್ ಹುಬ್ಬಳ್ಳಿ ಸೇರಿದಂತೆ ಇತರರು ಇದ್ದರು.