ಯಲಹಂಕ: ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನಾ ಅಂಗವಾಗಿ ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಮಾಚೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೇ ಸರಸ್ವತಿ ಮಾಯಣ್ಣ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿಸಲಾಯಿತು.
ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಮಾಚೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಮನೆಗೆ ಮಂತ್ರಾಕ್ಷತೆಯನ್ನು ತಲುಪಿಸುವ ಕಾರ್ಯವನ್ನು ಸೋಮವಾರ ಸಂಜೆ 4 ಗಂಟೆಗೆ ಅಧ್ಯಕ್ಷೆ ಸರಸ್ವತಿ ಮಾಯಣ್ಣ ಮತ್ತು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಉದ್ದಂಡಯ್ಯ ಮಾ|ಗ್ರಾ. ಅಧ್ಯಕ್ಷ ಎಂ ಬಿ ರಾಮಕೃಷ್ಣಯ್ಯ ಉಪಾಧ್ಯಕ್ಷೇ ಲಕ್ಷ್ಮಿದೇವಿ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.
ಮಾಚೋಹಳ್ಳಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಬೆಳ್ಳಿ ರಥದಲ್ಲಿ ಶ್ರೀ ರಾಮನ ಭಾವಚಿತ್ರವನ್ನು ಅಳವಡಿಸಿ ಮಂತ್ರಾಕ್ಷತೆಯನ್ನು ಇಟ್ಟು ಮಂಗಳವಾದ್ಯಗಳ ಮೂಲಕ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಬಳಿಕ ಗ್ರಾಮದ ಪ್ರತಿ ಮನೆಗಳಿಗೆ ಮಂತ್ರಾಕ್ಷತೆಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ನರಸಿಂಹಮೂರ್ತಿ, ಸೌಮ್ಯ ಶ್ರೀನಿವಾಸ್,ಪ್ರಕಾಶ್, ಆನಂದ್, ಶಶಿಕುಮಾರ್ ಸೇರಿದಂತೆ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.