ಹೊಸಕೋಟೆ: ಏಪ್ರಿಲ್ 26ರಂದು ನಡೆಯಲಿರುವ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ತಪ್ಪದೇ ಮತದಾನ ಮಾಡಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ: ಎನ್.ಶಿವಶಂಕರ್ ಮನವಿ ಮಾಡಿದರು.ನಗರದ ಚನ್ನಭೈರೇಗೌಡ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಡ್ಡಾಯವಾಗಿ ಮತದಾನ ಮಾಡುವುದರ ಮೂಲಕ ಉತ್ತಮ ನಾಯಕನನ್ನು ಆಯ್ಕೆ ಮಾಡಿ ಪ್ರಜಾ ಪ್ರಭುತ್ವದ ಮಹತ್ವವನ್ನು ಎತ್ತಿಹಿಡಿಯಬೇಕಿದೆ ಹಾಗೂ ಯಾವುದೇ ಜಾತಿ, ಧರ್ಮ, ಮತ, ಆಮಿಷಗಳಿಗೆ ಒಳಗಾಗದೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾನದಲ್ಲಿ ಬಾಗವಹಿಸುತ್ತೇನೆ ಎಂದು ಪ್ರಮಾಣವಚನ ಸ್ವೀಕರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಚುನಾವಣಾ ವೆಚ್ಚ ವೀಕ್ಷಕ ದೆಬಾಶಿಷ್ ಮಜೂಂದಾರ್, ಪೊಲೀಸ್ ವೀಕ್ಷಕ ರಾಥೋಡ್ ಅಮಿತ್ ಕುಮಾರ್ ಭರತ್, ಚುನಾವಣಾ ವೀಕ್ಷಕ ನ್ಯಾಲಿ ಯಟೆ, ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುರಾದ, ಸಹಾಯಕ ಚುನಾವಣಾಧಿಕಾರಿ ಕಿಶನ್ ಕುಲಾಲ್, ತಹಶೀಲ್ದಾರ್ ಎಂ. ವಿಜಯ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ನಗರಸಭೆ ಪೌರಾಯುಕ್ತ್ತ ಜಹೀರ್ ಅಬ್ಬಾಸ್ ಒಳಗೊಂಡಂತೆ ವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಪಂಜಿನ ಮೆರವಣಿಗೆ, ಮತದಾನ ಜಾಗೃತಿ ಭಿತ್ತಿಪತ್ರ ಬಿಡುಗಡೆ, ಬಲೂನ್ ಹಾರಾಟ ಮಾಡಲಾಯಿತು.ಮತದಾನ ಜಾಗೃತಿ ಸಹಿ ಅಭಿಯಾನದಕ್ಕೆ ಸ್ವತ: ಜಿಲ್ಲಾಧಿಕಾರಿ ಶಿವಶಂಕರ್ ಸಹಿ ಮಾಡುವ ಮೂಲಕ ಚಾಲನೆ ನೀಡಿದರು.ಆಶಾ ಕಾರ್ಯಕರ್ತೆಯರಿಂದ ರಂಗೋಲಿ ಸ್ಪರ್ಧೆ ಏರ್ಪಡಿಸಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಕಡ್ಡಾಯವಾಗಿ ಯಾವುದೇ ಜಾತಿ, ಮತ, ಆಮೀಶಗಳಿಗೆ ಒಳಗಾಗದೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾನದಲ್ಲಿ ಭಾಗವಹಿಸುತ್ತೇವೆ ಎಂದು ಪ್ರಮಾಣವಚನ ಸ್ವೀಕರಿಸಲಾಯಿತು.