ಬೆಂಗಳೂರು ನಗರ ಜಿಲ್ಲೆ: ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ಯೋಗಗಳಲ್ಲಿ ಬಳಸಿಕೊಳ್ಳುವುದು ಅಥವಾ ನೇಮಕ ಮಾಡಿಕೊಳ್ಳುವುದು ಅಪರಾಧವಾಗಿದೆ. ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಕೆ.ಎ.ದಯಾನಂದ ರವರು ಬಾಲಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಿಕ್ಷಣ ವಂಚಿತ ಮಕ್ಕಳು ಕಾರ್ಖಾನೆ, ಗ್ಯಾರೇಜು, ಹೋಟೆಲ್ ಮತ್ತಿತರ ಕೆಲಸ-ಕಾರ್ಯಗಳಲ್ಲಿ ತೊಡಗಿಕೊಂಡು ತಮ್ಮ ಅಮೂಲ್ಯವಾದ ಬಾಲ್ಯವನ್ನು ಹಾಳುಮಾಡಿಕೊಳ್ಳುತ್ತಿರುವುದು ಬೇಸರ ಸಂಗತಿ. ಅಂತಹ ಮಕ್ಕಳನ್ನು ಗುರುತಿಸಿ ಕೆಲಸಕ್ಕೆ ಬಳಸಿಕೊಳ್ಳುವವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ತಿಳಿಸಿದರು.
ಬಾಲ ಕಾರ್ಮಿಕರನ್ನು ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಿ ಅವರಿಗೆ ಉತ್ತಮ ಶಿಕ್ಷಣ ನೀಡಿ, ಸಮಾಜದ ಮುಖ್ಯವಾಹಿನಿಗೆ ತರುವದರ ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು ಎಂದರು.ಸಹಾಯಕ ಕಾರ್ಮಿಕ ಆಯುಕ್ತರಾದ ಎ.ಸಿ ತಮ್ಮಣ್ಣ ಅವರು ಮಾತನಾಡಿ,ಮೈಸೂರು ರಸ್ತೆಯ ಪಂತರಪಾಳ್ಯದಲ್ಲಿರುವ ನ್ಯೂ ಅಂಬೆ ಎಕ್ಸ್ ಪೋರ್ಟ್ ಸಂಸ್ಥೆಯ ಮೇಲೆ ಅನಿರೀಕ್ಷಿತ ದಾಳಿ ನಡೆಸಿದ ಸಂದರ್ಭದಲ್ಲಿ ಒಂದು ಹೆಣ್ಣು ಮಗುವನ್ನು ಕಿಶೋರ ಕಾರ್ಮಿಕಗಳಾಗಿ ನಿಯೋಜಿಸಿಕೊಂಡಿದ್ದು, ಕು.ಗಂಗಾ (15 ವರ್ಷ, ಪರಿಶಿಷ್ಟ ಜಾತಿ) ಬಾಲಕಿಯನ್ನು ಪತ್ತೆ ಹಚ್ಚಿ, ಪುನರ್ವಸತಿಗೊಳಿಸಿ, ಮುಖ್ಯವಾಹಿನಿಗೆ ಕರೆ ತಂದು ಶಾಲೆಗೆ ಸೇರಿಸಲಾಗಿದೆ.
ಕಳೆದ ಸಾಲಿನಲ್ಲಿ 08 ಪ್ರಕರಣಗಳಲ್ಲಿ ತಪ್ಪಿತಸ್ಥ ಮಾಲೀಕರಿಂದ ರೂ.1.60 ಲಕ್ಷ ಕಾರ್ಪಸ್ ನಿಧಿಯನ್ನು ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.ಇದೇ ಸಂದರ್ಭದಲ್ಲಿ ಸಹಾಯಕ ಕಾರ್ಮಿಕ ಆಯುಕ್ತರಾದ (ಂಐಅ-3) ಸಂತೋಷ್ ಹಿಪ್ಪರಗಿ ಹಾಗೂ ಕಾರ್ಮಿಕ ಇಲಾಖೆಯ ಸಿಬಂದ್ದಿಗಳು ಉಪಸ್ಥಿತರಿದ್ದರು.