ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಪ್ರಶಾಂತನಹಳ್ಳಿಯಲ್ಲಿರುವ ಆಕಾಶ್ ಇಂಟರ್ನ್ಯಾಷನಲ್ ಶಾಲೆಯ ಭದ್ರತಾ ಕೊಠಡಿ ಹಾಗೂ ಉದ್ದೇಶಿತ ಮತ ಎಣಿಕೆ ಕೇಂದ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್ಕುಮಾರ್, ದೇವನಹಳ್ಳಿ ತಹಶಿಲ್ದಾರ್ ಶಿವರಾಜ್ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
Leave a Review