ಕೋಲಾರ: ಕರ್ನಾಟಕ ರೈತ ಸುರಕ್ಷಿತ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ವಿಮಾ ಸೌಲಭ್ಯ ಪ್ರಯೋಜನಗಳನ್ನು ಎಲ್ಲಾ ರೈತರು ಸದುಪಯೋಗ ಪಡಿಸಿಕೊಳ್ಳುವ ರೀತಿ ಕಂದಾಯ ಇಲಾಖೆಗೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಬೆಳೆ ಕಟಾವು ಪ್ರಯೋಜನಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈ ಯೋಜನೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದ್ದು, ಇದರ ಮುಖ್ಯ ಉದ್ದೇಶ ರೈತರ ಬೆಳೆ ವಿಮೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸುವುದು. ಇದಕ್ಕೆ ಮುಖ್ಯ ಆಧಾರ ಬೆಳೆ ಕಟಾವು ಪ್ರಯೋಗಗಳಿಂದ ಬಂದ ಹಸಿ ಇಳುವರಿ (5*5/10*5) ಮೀಟರ್ ಮಾಹಿತಿಯು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಕೃಷಿ ಇಲಾಖೆಯು ಬೆಳೆವಾರು, ವಿಮ ಘಟಕವಾರು, ಋತುವಾರು, ಅಧಿಸೂಚಿಸಿದ ಅಧಿಸೂಚನೆಯಂತೆ ಬೆಳೆ ಕಟಾವು ಪ್ರಯೋಗಗಳ ಕಾರ್ಯಯೋಜನೆ ಮೂಲಕಾರ್ಯಕರ್ತರಿಗೆ ಹಂಚಿಕೆ ಮತ್ತು ಮೇಲ್ವಿಚಾರಣೆ ಕೈಗೊಳ್ಳುವುದು.ಬೆಳೆ ಕಟಾವು ಪ್ರಯೋಗಗಳಿಂದ ಬಂದ ಹಸಿ ಇಳುವರಿಯನ್ನು ಆಧರಿಸಿ ಬೆಳೆವಾರ ವಿಮಾ ಘಟಕವಾರು ಸರಾಸರಿ ಇಳುವರಿಯನ್ನು ಸಿದ್ಧಪಡಿಸಿ ಕೃಷಿ ಇಲಾಖೆಗೆ ನೀಡುವುದು ಮತ್ತು ಸಂರಕ್ಷಣೆ ಪೋರ್ಟಲ್ಗೆ ಅಪ್ಲೋಡ್ ಮಾಡುವುದು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಪ್ರಮುಖ ಜವಾಬ್ದಾರಿ ಯಾಗಿರುತ್ತದೆ. ಸಹಜವಾಗಿ ಬೆಳೆಯು ಬಿತ್ತನೆಯಾದ ಕನಿಷ್ಠ 20 ದಿನಗಳ ನಂತರ ನಮೂನೆ-1ನ್ನು ಅಪ್ಲೋಡ್ ಮಾಡುತ್ತಾರೆ ಎಂದು ತಿಳಿಸಿದರು.
ಜಿಲ್ಲಾ ಮಟ್ಟದಲ್ಲಿ ತಹಶೀಲ್ದಾರ್ ರವರಿಂದ ಸೀಕೃತವಾದ ವರದಿ ಹೋಬಳಿವಾರು ಮತ್ತು ತಾಲ್ಲೂಕುವಾರು ಬೆಳೆ ಅಂಕಿ ಅಂಶಗಳ ವರದಿಯನ್ನು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಪರಿಶೀಲಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ವರದಿಗಳನ್ನು ಸಿದ್ಧಪಡಿಸಬೇಕು. ಜಿಲ್ಲಾ ವರದಿ ಅಂದರೆ ಜಿಲ್ಲಾ ಬೆಳೆ, ಅಂಕಿ ಅಂಶಗಳ ಬೆಳೆ, ಹಳೆ ಅಂಕಿ ಅಂಶಗಳನ್ನು ಜಿಲ್ಲಾ ಮಟ್ಟದ ಅಧಿಕಾರಿ
ಗಳಿಗೆ ವರದಿಯನ್ನು ಸಲ್ಲಿಸಬೇಕಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಪದ್ಮ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಡಾ. ಶಂಕರ್ ವಣಿಕ್ಯಾಳ್, ಕೃಷಿ ಇಲಾಖೆಯ ಉಪನಿರ್ದೇಶಕಿ ಭವ್ಯರಾಣಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕುಮಾರಸ್ವಾಮಿ, ಕಂದಾಯ ಇಲಾಖೆಯ ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.