ಚಾಮರಾಜನಗರ: ಕಲೆ, ಸಂಸ್ಕೃತಿ, ಕ್ರೀಡಾ ಕೌಶಲ್ಯ, ಕಥೆ, ಕವನ, ಚಿತ್ರಕಲೆ ಚಟುವಟಿಕೆಗಳನ್ನು ಯುವಜನರಲ್ಲಿ ಉತ್ತೇಜಿಸುವ ಸಲುವಾಗಿ ಇದೇ ಅಕ್ಟೋಬರ್ ೧೬ರಂದು ನಗರದಲ್ಲಿ ಜಿಲ್ಲಾ ಯುವಜನೋತ್ಸವವನ್ನು ಆಯೋಜಿಸ ಲಾಗಿದ್ದು, ಇದಕ್ಕಾಗಿ ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣ ದಲ್ಲಿಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟಿçÃಯ ಯುವನೀತಿಯಡಿ ಯುವಜನರಲ್ಲಿರುವ ಕಲೆ, ಕ್ರೀಡಾ ಕೌಶಲ್ಯವನ್ನು ಪ್ರೋತ್ಸಾಹಿಸುವ ಸಲುವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದ್ದು, ಇದೇ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿಯೂ ನಿಗದಿಯಾಗಿರುವ ಯುವಜನೋತ್ಸವಕ್ಕೆ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡುವಂತೆ ಜಿ.ಪಂ ಸಿಇಒ ಅವರು ತಿಳಿಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಯುವಜನೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ವಿವಿಧ ಸ್ಪರ್ಧೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಸೂಕ್ತ ಪ್ರಚಾರ ವ್ಯವಸ್ಥೆ ಕೈಗೊಳ್ಳಬೇಕು. ಯುವಜನೋತ್ಸವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ, ಪ್ರಶಸ್ತಿ ಪತ್ರ, ವಿಜಯ ಫಲಕಗಳನ್ನು ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳಿಗೆ ಯಾದಗಿರಿ ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವ ಸ್ಪರ್ಧೆಗೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕಳುಹಿಸಿಕೊಡಲಾಗುತ್ತದೆ. ರಾಜ್ಯ ಮಟ್ಟದಲ್ಲಿ ವಿಜೇತರಾದವರು ರಾಷ್ಟçಮಟ್ಟಕ್ಕೆ ಅರ್ಹತೆ ಹೊಂದಲಿದ್ದಾರೆ ಎಂದರು.
ಯುವಜನೋತ್ಸವ ಸ್ಪರ್ಧೆಗಳಲ್ಲಿ ೧೫ ರಿಂದ ೨೯ರವರೆಗೆ ವಯೋಮಿತಿಯಲ್ಲಿರುವ ಜಿಲ್ಲೆಯ ಎಲ್ಲಾ ಯುವಕ ಯುವತಿಯರು, ಸಂಘ-ಸAಸ್ಥೆಗಳ ಪ್ರತಿನಿಧಿಗಳು, ಶಾಲಾ-ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಲು ಅವಕಾಶವಿರುತ್ತದೆ. ಈ ಯುವಜನೋತ್ಸವವನ್ನು ಸದುಪಯೋಗಪಡಿ ಸಿಕೊಳ್ಳಲು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸುವವರಿಗೆ ಉಪಹಾರ, ಕುಡಿಯುವ ನೀರು, ಇನ್ನಿತರ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಸ್ವಚ್ಚತಾ ವ್ಯವಸ್ಥೆ, ಇನ್ನಿತರ ಸಹಕಾರವನ್ನು ಇತರೆ ಇಲಾಖೆಗಳು ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ನಿರ್ದೇಶನ ನೀಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕರಾದ ಕೆ. ಸುರೇಶ್ ಅವರು ಮಾತನಾಡಿ ಮೇರಾ ಯುವ ಭಾರತ್, ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಈಗಾಗಲೇ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಯುವಜನೋತ್ಸವ ಯಶಸ್ವಿಗೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಿದೆ ಎಂದರು.
ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಶ್ರೀಕಂಠರಾಜೇ ಅರಸ್, ಮೇರಾ ಯುವಭಾರತ್ ಜಿಲ್ಲಾ ಯುವಜನ ಅಧಿಕಾರಿ ಪಿ. ಅಖಿಲ್, ಸಾಹಿತಿ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ಕಲಾವಿದರಾದ ಮಧುಸೂದನ್, ಯುವ ಪ್ರಶಸ್ತಿ ಪುರಸ್ಕೃತರಾದ ಜಿ. ಬಂಗಾರು, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ವಿಶ್ವವಿದ್ಯಾನಿಲಯದ ಬೋಧಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.