ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಯೋಜನೆ ಮತ್ತು ಸಂಖ್ಯಾಕಿಕ ಖಾತೆ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿದ್ಯುತ್ ಪೂರೈಕೆ ಮೇಲ್ವಿಚಾರಣಾ ಸಮಿತಿ ಸಭೆ ನೆಡೆಯಿತು.
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ನವರ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮತ್ತು ನಿರ್ವಹಣೆಯ ಕುರಿತು ನಡೆದ ವಿದ್ಯುತ್ ಪೂರೈಕೆ ಮೇಲ್ವಿಚಾರಣಾ ಸಮಿತಿಯ ತುರ್ತು ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ವಿದ್ಯುತ್ ಪೂರೈಕೆಯ ಸ್ಥಿತಿಗತಿ ಬಗ್ಗೆ ರೈತರ ಜಮೀನುಗಳಿಗೆ 7 ಗಂಟೆಗಳ ವಿದ್ಯುತ್ ಪೂರೈಕೆ ಮಾಡಲು ಅಧಿಕಾರಿಗಳ ಜೊತೆ ಗಂಭೀರ ಚರ್ಚೆ ನೆಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಶಾಸಕರಾದ ಬಿ.ಜಿ.ಗೋವಿಂದಪ್ಪ, ಡಾ.ಚಂದ್ರಪ್ಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,ಬೆಸ್ಕಾಂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.