ದಾವಣಗೆರೆ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ದಾವಣಗೆರೆ ಉಪಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಸಿದ್ದರಾಮಯ್ಯ ಸೇರಿ ಅಧಿಕಾರಕ್ಕೆ ತಂದಿದ್ದೇವೆ. ಉತ್ತಮ ಆಡಳಿತ ಕೊಡುತ್ತಿದ್ದೇವೆ. ನಮ್ಮ ಯೋಜನೆಗಳನ್ನು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನನ್ನಿಂದಾಗಲೀ, ಸಿದ್ದರಾಮಯ್ಯ ಅವರಿಂದಾಗಲೀ ಪಕ್ಷ ಅಧಿಕಾರಕ್ಕೆ ಬಂದಿಲ್ಲ. ಪಕ್ಷದ ಶಾಸಕರು ಕಳೆದ 10 ದಿನಗಳಿಂದ ಕ್ಷೇತ್ರದಲ್ಲಿ ಸೈನಿಕರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿರುವ ಅವರು, ನಮ್ಮೆಲ್ಲರ ಒಗ್ಗಟ್ಟಿನ ದುಡಿಮೆಯಿಂದ ಮತ್ತೆ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
ಮತ್ತೆ ರಾಜ್ಯದಲ್ಲಿ `ಕೈ’ ಸರ್ಕಾರ: ಡಿಕೆಶಿ



