ಬೆಂಗಳೂರು: ರಾಜ್ಯದಲ್ಲಿ ಸಿಎಂ ಹುದ್ದೆ ಬದಲಾವಣೆಯ ಜತೆಗೆ ಸಂಪುಟ ರಚನೆಯ ಕಸರತ್ತು ಅಂತಿಮ ಘಟ್ಟ ತಲುಪಿದೆ. ಸಚಿವ ಸಂಪುಟದಲ್ಲಿ ಯಾರೆಲ್ಲ ಇರಬೇಕು ಎಂಬುದು ಮತ್ತು ಇತರ ಪ್ರಮುಖ ರಾಜಕೀಯ ನಿರ್ಧಾರಗಳ ಕುರಿತು ಚರ್ಚಿಸಲು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳಿದ್ದಾರೆ.
ಸಂಭಾವ್ಯ ಸಚಿವರ ಪಟ್ಟಿ ಅಂತಿಮಗೊಳಿಸಲು ಹೈಕಮಾಂಡ್ ನಾಯಕರೊಂದಿಗೆ ಈ ಭೇಟಿ ನಿಗದಿಯಾಗಿದೆ. ಇಬ್ಬರು ನಾಯಕರು ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಇಂದು ಮಧ್ಯಾಹ್ನದ ನಂತರ ದೆಹಲಿಯ ಖರ್ಗೆ ಅವರ ನಿವಾಸದಲ್ಲಿ ನೂತನ ಸಚಿವರ ಪಟ್ಟಿ ಸಿದ್ಧ ಪಡಿಸುವ ಸಾಧ್ಯತೆಯಿದೆ.
ಡಿಕೆ, ಸಿದ್ದು ದೆಹಲಿಗೆ



