ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆದಿದೆ.
ಡಿ.ಕೆ.ಶಿವಕುಮಾರ್ ಅವರು ಸಲ್ಲಿಸಿದ್ದ ಮೇಲ್ಮನವಿಯ ಅರ್ಜಿಯ ವಿಚಾರಣೆಯೂ ನಡೆದು ರಾಜ್ಯ ಸರ್ಕಾರ ಸಿಬಿಐಗೆ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದ ಹಿನ್ನೆಲೆಯಲ್ಲಿ ಡಿ.ಕೆ.ಶಕುಮಾರ್ ಅವರ ವಕೀಲರು ಸಹ ತಾವು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹಿಂಪಡೆದಿದ್ದಾರೆ.
ಈ ಹಿಂದೆ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಶಿವಕುಮಾರ್ ಮೇಲ್ಮನವಿ ಸಲ್ಲಿಸಿದ್ದರು.ಕೆಲ ಕಾಲ ಎರಡು ಕಡೆಯವರ ವಾದ ವಿವಾದ ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಸ್ವಲ್ಪ ಹೊತ್ತಿನ ಕಾಲ ಮುಂದೂಡಿದಿದ್ದಾರೆ.
ತದನಂತರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ ಇದುವರೆಗೂ ಸರ್ಕಾರದ ಕ್ರಮವನ್ನು ಯಾರು ಪ್ರಶ್ನಿಸಿಲ್ಲ ಎಂದು ತಿಳಿಸಿ ಡಿ.ಕೆ.ಶಿವಕುಮಾರ್ ಅವರು ಸಲ್ಲಿಸಿದ್ದ ಮೇಲ್ಮನವಿ ವಾಪಸ್ ಪಡೆಯಲು ಅನುಮತಿ ನೀಡಿ ಆದೇಶಿಸಿತು.