ದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್ ಅವರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ನಿನ್ನೆ ಸಂಜೆಯೇ ದೆಹಲಿಗೆ ಆಗಮಿಸಿರುವ ಅವರು ಇಂದು ಕರ್ನಾಟಕ ಭವನದಲ್ಲಿ ಇದ್ದಾರೆ.
ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ. ಬಹಳ ಕಾಲದಿಂದ ಮುಖ್ಯಮಂತ್ರಿ ಪಟ್ಟಕ್ಕಾಗಿ ಹವಣಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರು ಈ ಭಾರಿ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಅಹವಾಲನ್ನು ಅವರ ಮುಂದೆ ಹೇಳಿಕೊಳ್ಳಲು ದೆಹಲಿಗೆ ಬಂದಿದ್ದಾರೆ ಎಂದು ಹೇಳಲಾಗಿದೆ.
ಇಂದು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಪ್ರಮುಖರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಕೆ.ಸಿ.ವೇಣುಗೋಪಾಲ್ ಅವರನ್ನು ಸಂಪರ್ಕಿಸಿ ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ದೆಹಲಿಯಲ್ಲಿ ಡಿಕೆ ಸೋದರರು



