ತುಮಕೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಒಂದಿಲ್ಲೊಂದು ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇದ್ದಾರೆ. ನಿನ್ನೆಯಷ್ಟೇ ಬೆಂಗಳೂರು ನಗರ ದೇವತೆ ಅಣ್ಣಮ್ಮ ದೇವಿ ದರ್ಶನ ಪಡೆದು ಹರಕೆ ತೀರಿಸಿದ್ದ ಡಿಕೆಶಿ ಅವರಿಂದು, ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಮಠಕ್ಕೆ ಭೇಟಿ ನೀಡಲಿದ್ದು, ತಮ್ಮ ಆರಾಧ್ಯ ದೈವ ಅಜ್ಜಯ್ಯನ ಪೀಠಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಸಂಜೆ 5 ಗಂಟೆಯಿAದ ರಾತ್ರಿ 8 ಗಂಟೆವರೆಗೆ ಮಠದಲ್ಲೇ ಇದು, ಅಲ್ಲಿ ನಡೆಯುವ ವಿವಿಧ ಪೂಜಾ ಕೈಂಕರ್ಯಗಳನ್ನ ನೇರವೇರಿಸಲಿದ್ದಾರೆ.



