ಬೆಂಗಳೂರು ನಗರ ಜಿಲ್ಲೆ: ಜಿಲ್ಲೆಯಲ್ಲಿ ಸಾರ್ವಜನಿಕರು ಕೋವಿಡ್ ಕುರಿತು ಭಯ ಪಡದೆ ಸರ್ಕಾರದಿಂದ ನೀಡಲಾಗುವ ಮಾರ್ಗ ಸೂಚಿಗಳನ್ನು ಪಾಲಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಎಂದು ಅಪರ ಜಿಲ್ಲಾಧಿಕಾರಿ ಟಿ.ಎನ್.ಕೃಷ್ಣಮೂರ್ತಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ಸರ್ಕಾರದ ಮಾರ್ಗಸೂಚಿಯಂತೆ 60 ವರ್ಷ ಮೇಲ್ಪಟ್ಟವರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಗರ್ಭೀಣಿಯರು ಹಾಗೂ ಮಕ್ಕಳಿಗೆ ಹಾಲುಣಿಸುವ ತಯಾಂದಿರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿ ಹಾಗೂ ಹೆಚ್ಚು ಜನ ಸಂದಣಿ ಇರುವ ಪ್ರದೇಶದಲ್ಲಿ ಅನವಶ್ಯಕವಾಗಿ ಓಡಾಡುವುದು, ಸೇರುವುದು ಬೇಡ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕೋವಿಡ್ ಪರೀಕ್ಷೆ ಆರೋಗ್ಯ ಇಲಾಖೆಯಿಂದ ಜಿಲ್ಲೆಯಲ್ಲಿ ಪ್ರತಿದಿನ ಕೋವಿಡ್ ಪರೀಕ್ಷೆ ನಡೆಸಲು ಗುರಿ ನಿಗಧಿಯಾಗಿದ್ದು, SARI ((severe acute respiratory infection)) ತೀವ್ರತರ ಉಸಿರಾಟದ ಸೋಂಕು ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಿ ಎಂದರು.
ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಕೋವಿಡ್ ಪರೀಕ್ಷೆಗೆ ಬೇಕಿರುವ ಸಲಕರಣೆಗಳು, ಸೋಂಕು ಪತ್ತೆಯಾದ ನಂತರ ಚಿಕಿತ್ಸೆಗೆ ಬೇಕಿರುವ ಬೆಡ್ ವ್ಯವಸ್ಥೆ, ಔಷಧಿಗಳು, ಕಾನ್ಟೆಕ್ಟ್ ಟ್ರೆಸಿಂಗ್ ಗೆ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಹೊರ ರಾಜ್ಯ ಹಾಗೂ ಹೊರ ದೇಶಗಳಿಗೆ ಪ್ರಯಾಣ ನಡೆಸಿ ಹಿಂದುರಿಗಿದ ನಂತರ ಅವರಿಗೆ ಕೋವಿಡ್ ಲಕ್ಷಣಗಳಿದ್ದಲ್ಲಿ ಪರೀಕ್ಷೆಗೆ ಒಳಪಡಿಸಿ ಎಂದರು.
ಸಾರ್ವಜನಿಕರು ಶೀತ, ಜ್ವರ, ಕೆಮ್ಮು ಲಕ್ಷಣಗಳು ಇದ್ದಲ್ಲಿ ಮಾಸ್ಕ್ ಧರಿಸಿ ಸಾರ್ವಜನಿಕ ಸ್ಥಳದಿಂದ ದೂರವಿರಿ ಎಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರವೀಂದ್ರ ಮೀಟಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶರತ್ ಬಾಬು, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.