ಚಿತ್ರದುರ್ಗ: ನಗರದ ಬಸವೇಶ್ವರ ನಗರದ ಪೊಲೀಸ್ ವಸತಿ ಗೃಹದಲ್ಲಿ. ರಾಜ್ಯ ಪೊಲೀಸ್ ಹಾಗೂರಾಜ್ಯ ಪೊಲೀಸ್ ವಸತಿ ಗೃಹ ಮತ್ತು ಮೂಲ ಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ. ಪೊಲಿಸ್ ಸಮುಚ್ಚಯ ಹಾಗೂ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ತಳಕು ಪೊಲೀಸ್ ಠಾಣೆ ನೂತನ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ.
ಗೃಹ ಸಚಿವ ಡಾ.ಜಿ. ಪರಮೇಶ್.ರಾಜ್ಯದ ಪೊಲೀಸ್ ಇಲಾಖೆಯಲ್ಲಿ 1,ಲಕ್ಷದ 10 ಸಾವಿರ ಸಿಬ್ಬಂದಿ ಇದ್ದು.ಇದರಲ್ಲಿ ಕನಿಷ್ಠ 70ರಿಂದ 80,000 ವಸತಿ ಸಮುಚ್ಚಯಗಳನ್ನು ನಿರ್ಮಿಸ ಬೇಕೆಂಬ ಗುರಿ ನನ್ನಲ್ಲಿ ಇದೆ. ಪ್ರಾರಂಭದಲ್ಲಿ ಒಂದು ಘಟಕ ನಿರ್ಮಿಸಲು ವೆಚ್ಚ 16 ಲಕ್ಷ ಇತ್ತು. ಈಗ 20 ಲಕ್ಷ ವಾಗಿದೆ. ಪೊಲೀಸ್ ಕುಟುಂಬಕ್ಕೆ ಅನಿಲ ಸಂಪರ್ಕ ಆಧುನಿಕ ಮಾದರಿಯ ಕಿಚನ್ ಸೇರಿದಂತೆ. ಈಗಿನ ಆಧುನಿಕತೆಗೆ ತಕ್ಕಂತೆ ಗೃಹಗಳನ್ನು ನಿರ್ಮಿಸಿದ್ದೇವೆ ಎಂದರು.
ರಾಜ್ಯ ಇನ್ನೂ ಹತ್ತು ಸಾವಿರ ವಸತಿ ಸಮುಚ್ಚಯಗಳನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ. ಸರ್ಕಾರ 600 ಕೋಟಿ ರೂಪಾಯಿಗಳನ್ನು ವಸತಿ ಸಂಮುಚ್ಚಾಯಗಳ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿದ್ದು. ಸುಂದರ ಪೊಲೀಸ್ ವಸತಿ ಸಂಮುಚ್ಚಾಯಗಳನ್ನು. ನಿರ್ಮಿಸುತ್ತೇವೆ ಎಂದು ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಕಾರ್ಯಕ್ರಮದಲ್ಲಿ ಯೋಜನೆ ಮತ್ತು ಸಾಂಕೀಕ ಖಾತೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ.
ಚಿತ್ರದುರ್ಗ ಹಾಗೂ ಹಿರಿಯೂರು ನಲ್ಲಿಪೊಲಿಸ್ ವಸತಿ ಸಮುಚ್ಚಗಳು ನಿರ್ಮಾಣವಾಗಬೇಕು. ಹಿರಿಯೂರು ಮತ್ತು ಚಳ್ಳಕೆರೆಯಲ್ಲಿ ಸಂಚಾರಿ ಪೊಲೀಸ್ ಠಾಣೆಯ ಅಗತ್ಯವಿದೆ ಎಂದರು.ಹೊಸದುರ್ಗದಲ್ಲಿ ಹೆಚ್ಚುವರಿ ಪೊಲೀಸ್ ಠಾಣೆ ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರಿನಲ್ಲಿ ಪೊಲೀಸ್ ಠಾಣೆಯ ಅಗತ್ಯವಿದ್ದು. ಇವುಗಳ ಸ್ಥಾಪನೆಗೆ ಅವಕಾಶ ಮಾಡಿಕೊಡಬೇಕೆಂದು. ಗೃಹ ಸಚಿವರಿಗೆ ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಕೆ.ಎಸ್.ಪಿ. ಹೆಚ್ ಐ.ಡಿ.ಸಿ.ಎಲ್ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಕೆ.ರಾಮಚಂದ್ರರಾವ್, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ,ಹೊಸದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಜಿ.ಗೋವಿಂದಪ್ಪ,ದಾವಣಗೆರೆ ಪೂರ್ವ ವಲಯದ ಉಪ ಪೊಲೀಸ್ ಮಹಾ ನಿರ್ದೇಶಕ ಡಾ.ಕೆ.ತ್ಯಾಗಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಸಿಇಒ ಸೋಮಶೇಖರ್, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಚಂದ್ರಪ್ಪ ಉಪಸ್ಥಿತರಿದ್ದರು.