ಬೆಂಗಳೂರು ನಗರ ಜಿಲ್ಲೆ: ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಸ್ಕ್ಯಾನಿಂಗ್ ಕೇಂದ್ರಗಳು ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಮ್ಮ ತಂಡದೊಂದಿಗೆ ಭೇಟಿ ನೀಡಿ ಗರ್ಭ ಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ (PCPNDT) ಕಾಯ್ದೆ ಅಡಿಯಲ್ಲಿ ದಾಖಲಾತಿಗಳನ್ನು ಸಮರ್ಪಕವಾಗಿ ನಿರ್ವಹಿಸದೇ ಇದ್ದಂತಹ ಕಗ್ಗದಾಸಪುರದ ಎಸ್.ಎಸ್. ಲ್ಯಾಬ್ ಆಂಡ್ ಡಯಾಗ್ನೋಸ್ಟಿಕ್ ಮತ್ತು ಮೆಡಿ ಝೋನ್ ಡಯಾಗ್ನೋಸ್ಟಿಕ್ ಕೇಂದ್ರಗಳ ಮೇಲೆ ದಾಳಿ ನಡೆಸಿ ಬೀಗ ಮುದ್ರೆ ಹಾಕಿ ಮುಚ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ರವೀಂದ್ರನಾಥ್ ಎಂ ಮೇಟಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ನದೀಮ್ ಅಹಮದ್, ಬೆಂಗಳೂರು ಪೂರ್ವ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಕೋಮಲ ಹೆಚ್ ಟಿ., ಡಾ. ಲೀಲಾ ಆರ್ ಪಿ. ರೇಡಿಯೋಲಾಜಿಸ್ಟ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.