This is the title of the web page
This is the title of the web page

ಡಾ.ರಾಜಕುಮಾರ್ ಜನ್ಮದಿನಾಚರಣೆಯನ್ನು `ಕನ್ನಡ ಅಭಿಮಾನದ ದಿನ’ವೆಂದು ಆಚರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ವರನಟ ಡಾ.ರಾಜಕುಮಾರ್ ಜನ್ಮದಿನಾಚರಣೆಯನ್ನು ಕನ್ನಡ ಅಭಿಮಾನದ ದಿನವೆಂದು ಆಚರಿಸಿದರು. ಕನ್ನಡ ಅಭಿಮಾನ ದಿನದ ಅಂಗವಾಗಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು.

ಡ್ಡಬಳ್ಳಾಪುರ ಶ್ರೀವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾಗಳಾದ ಎಚ್.ಸ್ನೇಹ, ಎಂ.ರೇಖಾ, ಎಂ.ಬಿಂದು, ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎಸ್.ಎಂ.ಶ್ರೀದೇವಿ, ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎಲ್.ಎಂ.ಮೇಘನಾ ಅವರುಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದಿರುವುದರಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಅಭಿನಂದಿಸಿದರು.

ದೊಡ್ಡಬಳ್ಳಾಪುರ ನಗರದ ಶ್ರೀವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡ ಅಭಿಮಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಡಾ.ರಾಜಕುಮಾರ್ ಭಾಗಹಿಸಿದ್ದ ಗೋಕಾಕ್ ಚಳುವಳಿಯು ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಯಿತು. ರಾಜಕುಮಾರ್ ನಟಿಸಿದ ಚಿತ್ರಗಳು ಕನ್ನಡಿಗರ ಸಾಮಾಜಿಕ ಮತ್ತು ಸಾಂಸ್ಕೃತಿಕ ಬದುಕಿನ ಮೇಲೆ ಪ್ರಭಾವ ಬೀರಿತ್ತು ಎಂದರು.

ಅನಿಕೇತನ ಟ್ರಸ್ಟ್ ಕಾರ್ಯದರ್ಶಿ ನಾಗಸಂದ್ರ ನಟರಾಜ್ ಮಾತನಾಡಿ, ಡಾ.ರಾಜ ಕುಮಾರ್ ಅವರು ತಾವು ನಿರ್ವಹಿಸಿದ ಪಾತ್ರ
ಗಳಲ್ಲಿ ಭಾಷೆ ಮತ್ತು ಸಾಹಿತ್ಯವನ್ನು ಅರ್ಥಪೂರ್ಣವಾಗಿ ಬಳಸುತ್ತಿದ್ದರು. ಅಸಂಖ್ಯಾತ ಪ್ರೇಕ್ಷಕರು ಡಾ.ರಾಜಕುಮಾರ್ ಅವರ ಚಿತ್ರ
ಗಳನ್ನು ನೋಡಿ ತಮ್ಮ ಬದುಕಿನಲ್ಲಿ ಬದಲಾವಣೆಯಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಆರ್.ವೇಣುಗೋಪಾಲ್, ಕನ್ನಡ ಉಪನ್ಯಾಸಕ ಗಂಗರಾಜು, ಕನ್ನಡ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷೆ ನೇತ್ರಾವತಿ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಗರದ ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿನಿ ಎಸ್.ಎಂ.ಶ್ರೀದೇವಿ ವಿದ್ಯಾರ್ಥಿನಿಯನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಎನ್.ಆನಂದಮೂರ್ತಿ, ಉಪಪ್ರಾಂಶುಪಾಲ ಎಸ್.ಎಸ್.ಶಿವಶಂಕರ್, ಭಾರತ ಸೇವಾದಳದ ಎಸ್.ಬೋರಪ್ಪ, ಉಪನ್ಯಾಸಕರುಗಳಾದ ಕೆ.ನಾಗಮಣಿ, ಜಿ.ಶಿವಶಂಕರ್, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀಕಾಂತ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಪಿ.ಡಿ.ದಾದಾ ಪೀರ್ ಮತ್ತು ಪೊಷಕರು ಭಾಗವಹಿಸಿದ್ದರು.

ನಗರದ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿನಿ ಎಲ್.ಎಂ.ಮೇಘನಾ ವಿದ್ಯಾರ್ಥಿನಿಯನ್ನು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಎಸ್.ಆರ್.ರಂಗನಾಥ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಗಿರೀಶ್ ಎನ್.ಬರಗೂರು, ಕಾಲೇಜಿನ ಉಪನ್ಯಾಸಕರು ಮತ್ತು ಪೋಷಕರು ಭಾಗವಹಿಸಿದ್ದರು.