ಬೆಂಗಳೂರು: ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಕೊನೆಯ ಹಂತ ತಲುಪಿದ್ದು, ಕಳೆದ ೬ ತಿಂಗಳಿAದ ತನಿಖೆ ನಡೆಸುತ್ತಿದ್ದ ಡಿಆರ್ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ. ೧೨೩ ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಾಟ ಮಾಡಿರೋದು ಪ್ರಕರಣದ ತನಿಖೆಯ ವೇಳೆ ಬೆಳಕಿಗೆ ಬಂದಿದೆ.ಈಗಾಗಲೇ ೫ ಜನ ಆರೋಪಿಗಳಿಗೂ ಕೂಡ ಶೋಕಾಸ್ ನೋಟಿಸ್ ನೀಡಿದ್ದ ಡಿಆರ್ಐ ಕೇವಲ ರನ್ಯಾ ರಾವ್ ೧೦೨ ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮ ಮಾಡಿದ್ದಾರೆ ಅನ್ನೋದು ಸ್ಪಷ್ಟವಾಗಿ ತನಿಖೆಯಲ್ಲಿ ಅನಾವರಣ ಆಗಿದೆ.
ಇನ್ನುಳಿದ ನಾಲ್ವರು ಆರೋಪಿಗಳಿಗೂ ಕೂಡ ಪ್ರತ್ಯೇಕ ಶೋಕಾಸ್ ನೋಟಿಸ್ ನೀಡಲಾಗಿತ್ತು. ಈಗ ಪ್ರಕರಣ ಕೊನೆಯ ಹಂತಕ್ಕೆ ತಲುಪಿದ್ದು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲು ತಯಾರಿ ನಡೆದಿದೆ.ಇದ್ರಲ್ಲಿ ಮಲತಂದೆ ರಾಮಚಂದ್ರರಾವ್ ಅವರ ಕಾರು ದುರ್ಬಳಕೆ, ರಾಜಕಾರಣಿಗಳ ಹೆಸರು ದುರ್ಬಳಕೆ ಎಲ್ಲಾ ಮಾಹಿತಿಯೂ ತನಿಖೆಯಲ್ಲಿ ಬಹಿರಂಗ ಆಗಿದೆ.



