ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ ಪಂದ್ಯ ಆಯೋಜಿಸಲಾಗಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಇಂದು ಮತ್ತು ಶನಿವಾರ ಎರಡು ದಿನಗಳ ಕಾಲ ಪಂದ್ಯ ನಡೆಯಲಿದೆ.
ಈ ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್ ರಾಜಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜಕುಮಾರ್ ಅವರು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು.ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್…
ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕೆರೆಯ ನೀರಿಗೆ ಅರ್ಪಣೆ ಮಾಡಿ, ಯಾವುದೇ ಅಡ್ಡಿ-ಆತಂಕ ಎದುರಾಗದಂತೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸಿ ಕಾಯಿ ಒಡೆದರು.