ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಜೋನ್ ನಲ್ಲಿರುವ ಶ್ರೀ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಮುತ್ತ ಕಾಡುಪ್ರಾಣಿಗಳ ಚಿತ್ರೀಕರಣ ಹಾಗೂ ಡ್ರೋನ್ ಮೂಲಕ ಚಿತ್ರೀಕರಣ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಾಲೂಕು ದಂಡಾಧಿಕಾರಿಗಳಾದ ಟಿ ರಮೇಶ್ ಬಾಬು ಆದೇಶ ಹೊರಡಿಸಿದ್ದಾರೆ.
ಬೆಟ್ಟಕ್ಕೆ ಅತಿ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಪ್ರವಾಸಿಗರು ಬೇಟೆ ನೀಡುತ್ತಾರೆ ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು ಸಂಜೆಯಾಗುತ್ತಿದ್ದಂತೆ ಕಾಡಾನೆಯೂಂದು ದೇವಸ್ಥಾನದ ಬಳಿ ಬರುತ್ತದೆ ಪ್ರವಾಸಿಗರು ಕಾಡಾನೆ ಎಂದು ತಿಳಿದಿದ್ದರು ಕೂಡ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುತ್ತಿರುವ.
ದೃಶ್ಯಗಳು ಜಾಲತಾಣಗಳಲ್ಲಿ ವೈರಲ್ ಆಗಿವೆ ಕಾಡು ಪ್ರಾಣಿಗಳಿಂದ ಹಾನಿಯಾಗುವುದನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಸುತ್ತಮುತ್ತ ಕಾಡು ಪ್ರಾಣಿಗಳ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.