ಬೆಂಗಳೂರು: ಅಕ್ರಮವಾಗಿ ಮಾದಕ ವಸ್ತುಗಳನ್ನು ತಯಾರು ಮಾಡುತ್ತಿದ್ದ ಘಟಕ ಬೆಂಗಳೂರಿನಲ್ಲಿ ಪತ್ತೆಯಾಗಿದೆ.ಬೆಂಗಳೂರಿನ ರಾಮಮೂರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ತಯಾರು ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಾದಕ ವಸ್ತು ತಯಾರು ಮಾಡುತ್ತಿದ್ದ ವ್ಯಕ್ತಿ ಮೂಲತಃ ನೈಜೀರಿಯಾ ದೇಶದ ವ್ಯಕ್ತಿ ಬೆಂಜಮಿನ್(40) ಎನ್ನಲಾಗಿದ್ದು, ಆತ ಸಂಗ್ರಹಿಸಿಟ್ಟಿದ್ದ ಅಪಾರ ಮೌಲ್ಯದ ಮಾದಕ ವಸ್ತು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿರುವ ವಸ್ತುಗಳ ಮೌಲ್ಯ ಸುಮಾರು 10 ಕೋಟಿ ರೂಪಾಯಿ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬಂಧಿತ ವ್ಯಕ್ತಿ ರಾಜ್ಯ ಹಾಗೂ ದೇಶ ವಿದೇಶಗಳಿಗೂ ಸಹ ಮಾದಕ ವಸ್ತು ಮಾರಾಟ ಮಾಡುತ್ತಿದ್ದನೆಂದು ಹೇಳಲಾಗಿದೆ.ದೇಶ ವಿದೇಶಗಳಿಗೆ ಅಡುಗೆ ಮಾಡವ ಕುಕ್ಕರ್ನಲ್ಲಿ ಸಿಂಥೆಟಿಕ್ಸ್ ಡ್ರಗ್ಸ್ ಗಳನ್ನು ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಸಿಸಿಬಿ ಪೊಲೀಸರು ಅವಲಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೈಜೀರಿಯಾ ದೇಶದ ಪ್ರಜೆ ಶೇಖರಿಸಿಟ್ಟಿದ್ದ ಮಾದಕ ಒಆಒಂ ಹಾಗೂ ಇತರೆ ದ್ರವ್ಯಗಳನ್ನು ವಶಪಡಿಸಿಕೊಂಡಿರುತ್ತಾರೆ,ಆರೋಪಿಯು ವ್ಯಾಪಾರ ವಿಸಾದ ಮೇಲೆ ಬೆಂಗಳೂರಿಗೆ ಬಂದು ನೆಲೆಸಿದ್ದನು ಎಂದು ಆಯುಕ್ತರು ವಿವರಿಸಿದ್ದಾರೆ.