ಬೆಂಗಳೂರು: ಟೆಸ್ಟ್ ಡ್ರೈವ್ ವೇಳೆ ಮಹಿಳೆ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಫುಟ್ಪಾತ್ ಮೇಲಿದ್ದ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ನಡೆದಿದೆ.
ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಯ್ಯನಪಾಳ್ಯ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಟೆಸ್ಟ್ ಡ್ರೈವ್ಗಾಗಿ ಕೆಂಪು ಬಣ್ಣದ ಶಿಫ್ಟ್ ಡಿಸೈರ್ ಕಾರು ತೆಗೆದುಕೊಂಡಿದ್ದ ಮಹಿಳೆ ಚಾಲನೆ ಮಾಡುತ್ತಿದ್ದ ವೇಳೆ ಏಕಾಏಕಿ ಕಾರಿನ ನಿಯಂತ್ರಣ ತಪ್ಪಿದೆ.
ನಿಯಂತ್ರಣ ತಪ್ಪಿದ ಕಾರು ಫುಟ್ಪಾತ್ ಮೇಲೆ ಹತ್ತಿ ಅಲ್ಲಿದ್ದ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊAಡಿದೆ. ಅದೃಷ್ಟವಶಾತ್ ಮಹಿಳೆ ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಟೆಸ್ಟ್ ಡ್ರೈವ್ ವೇಳೆ ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿ



