ಬೆಂಗಳೂರು : ಬೆಂಗಳೂರು ನಗರದಲ್ಲಿ ಫೀಲ್ಡ್ ಮರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ ೨೬ ರಂದು ನಡೆಯಲಿರುವ ರಾಜ್ಯ ಮಟ್ಟದ ೭೭ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಿಸಲು ಸಾರ್ವಜನಿಕರಿಗೆ ಇ-ಪಾಸ್ ವ್ಯವಸ್ಥೆ ಯನ್ನು ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ರವರು ತಿಳಿಸಿದ್ದಾರೆ.
ಆಸಕ್ತರು ಸೇವಾ ಸಿಂಧು ವೆಬ್ ಸೈಟ್ (www.sevasindhu.karnataka.gov.in) ನಲ್ಲಿ ಜನವರಿ ೨೪, ೨೦೨೬ ರ ಸಂಜೆ ೫.೦೦ ಗಂಟೆಯೊಳಗೆ ಸೇವಾ ಸಿಂಧು ವೆಬ್ ಸೈಟ್ ನಲ್ಲಿ ಅಗತ್ಯವಿರುವ ಎಲ್ಲ ವೈಯಕ್ತಿಕ ವಿವರಗಳನ್ನು ನಮೂದಿಸಿ ಇ-ಪಾಸ್ ಗಳನ್ನು ಪಡೆಯಬಹುದು.
ಇ-ಪಾಸ್ ಗಳನ್ನು ಹೊಂದಿರುವವರು ಪರೇಡ್ ಮೈದಾನದ ಪ್ರವೇಶ ದ್ವಾರ ಸಂಖ್ಯೆ : ೦೫ ರಲ್ಲಿ ಪರಿಶೀಲನೆಗಾಗಿ ಇ-ಪಾಸ್ ನ ಮುದ್ರಿತ ಪ್ರತಿಯನ್ನು ಅಥವಾ ಡಿಜಿಟಲ್ (ಮೊಬೈಲ್ ) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
ಇ-ಪಾಸ್ ನೋಂದಣಿ ಪ್ರಕ್ರಿಯೆ ಕುರಿತು ಸಹಾಯಕ್ಕಾಗಿ ಸೇವಾ ಸಿಂಧು ವೈಬ್ ಸೈಟ್ ನಲ್ಲಿ ಸಹಾಯ ವಿಭಾಗವನ್ನು ವಿಕ್ಷೀಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರಿಗೆ



