ಬೆಂಗಳೂರು: ಲೋಕಾಯುಕ್ತ ದಾಳಿಯ ಬೆನ್ನಲ್ಲೇ ಇಂದು ಮುಂಜಾನೆ ಮಾಗಡಿ ರಸ್ತೆ, ಆಡುಗೋಡಿ ಸೇರಿ ನಗರದ ವಿವಿಧ ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಗರದ ಮಾಗಡಿ ರಸ್ತೆ, ಆಡುಗೋಡಿಯ ಹಲವೆಡೆ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಎರಡು ಇನೋವಾ ಕಾರುಗಳಲ್ಲಿ ಬಂದಿರುವ ಆರು ಅಧಿಕಾರಿಗಳು ಇಂದು ಬೆಳಿಗ್ಗೆ 7ರ ವೇಳೆ ಮಾಗಡಿ ರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವವರ ಇಟಿಎ ಗಾರ್ಡನ್ ಅಪಾರ್ಟ್ ಮೆಂಟ್ ನಲ್ಲಿರುವ ಫ್ಲ್ಯಾಟ್ ಮೇಲೆ ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.
ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಒಟ್ಟು 11 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿತ್ತು. ಅಲ್ಲದೇ ಮೊನ್ನೆ ಬೆಂಗಳೂರಿನ ವಿವಿದೆಡೆ ಡ್ರೈಫ್ರೂಟ್ ವ್ಯಾಪಾರಿಗಳ ಮನೆ ಹಾಗೂ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.