ಮಾಲೂರು: ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ಕೆ.ವೈ. ನಂಜೇಗೌಡರ ಮನೆ ಮೇಲೆ ಇಡಿ ದಾಳಿ ನಡೆಸಿದೆ.
ಕೊಮ್ಮನಹಳ್ಳಿಯಲ್ಲಿರುವ ಮನೆಯಲ್ಲಿ ಶೋಧ ಹಾಗೂ ಕೋಲಾರ ತಾಲ್ಲೂಕು ಹುತ್ತೂರು ಹೋಬಳಿಯಲ್ಲಿರುವ ಕೋಚಿಮುಲ್ ನಲ್ಲಿ ದಾಖಲೆಗಳ ಪರಿಶೀಲನೆ ಸೇರಿದಂತೆ ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ ನಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಇತ್ತೀಚೆಗೆ ಕೋಚಿಮುಲ್ ನೇಮಕಾತಿ ವಿಚಾರದಲ್ಲಿ ಸಾಕಷ್ಟು ಅವ್ಯವಹಾರದ ಆರೋಪ ಕೇಳಿಬಂದಿತ್ತು ನೇಮಕಾತಿ ವಿಚಾರದಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿರುವ ಅರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಕೋಚಿಮುಲ್ನ ಕೆಲ ಅಧಿಕಾರಿಗಳ ಮನೆ ಮೇಲೂ ದಾಳಿ ನಡೆಸಿ ದಾಖಲೆ ಪತ್ರ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.