ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ.
ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ತನಿಖೆ ಆರಂಭಿಸಿದೆ. ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯವು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಮತ್ತು ಪರುಶರಾಮ್ ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿದೆ.
ಮತ್ತೊಂದೆಡೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಕೂಡ ತನ್ನದೇ ಆಯಾಮದಲ್ಲಿ ತನಿಖೆ ನಡೆಸುತ್ತಿದೆ.ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಈವರೆಗೆ ಎಸ್ಐಟಿಯಿಂದ ಒಟ್ಟು 9 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಒಟ್ಟು 94 ಕೋಟಿ 73 ಲಕ್ಷ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಈ ಪೈಕಿ ಎಸ್ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.