ಬೆಂಗಳೂರು : ಪೀಣ್ಯ ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ರಸ್ತೆದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಪಣಿಕರ್ ಮೋಸಸ್(೮೩) ಎಂಬ ವೃದ್ಧ ಮೃತಪಟ್ಟ ದುರ್ದೈವಿ.ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನವಂಬರ್ ೯ರಂದು ಸಂಜೆ ೬:೦೦ ಸುಮಾರಿಗೆ ಅಪಘಾತ ಸಂಭವಿಸಿತ್ತು. ಪೀಣ್ಯ ಸಂಚಾರಿ ಪೊಲೀಸರು ಅಪಘಾತ ಪ್ರಕರಣ ದಾಖಲು ಮಾಡಿಕೊಂಡು ಡಿಕ್ಕಿ ಹೊಡೆದು ಪರಾರಿಯಾಗಿರುವ ಅಪರಿಚಿತ ವಾಹನ ಪತ್ತೆ ಮಾಡಲು ಕ್ರಮ ಕೈಗೊಂಡಿರುತ್ತಾರೆ.
“ಅಪರಿಚತ ವಾಹನ ಡಿಕ್ಕಿಗೆ ವೃದ್ಧ ಬಲಿ”



