ಬೆಂಗಳೂರು: ವಿಧಾನಪರಿಷತ್ ಚುನಾವಣೆ ಫಲಿತಾಂಶದ ಹನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಅಡ್ಡ ಮತದಾನ ಮಾಡಿರುವುದಕ್ಕೆ ಯಾರ ವೈಫಲ್ಯ ಎಂಬುದರ ಬಗ್ಗೆ ಪಕ್ಷದ ವರಿಷ್ಠರು ಪತ್ತೆಹಚ್ಚಲು ಮುಂದಾಗಿದ್ದಾರೆ.
ಅಡ್ಡಮತದಾನ ಮಾಡಿದ ಶಾಸಕರು ಯಾರು ಎಂಬುದನ್ನು ತಿಳಿಯಲು ಈಗಾಗಲೇ ರಾಜ್ಯಸಮಿತಿ ತ್ರಿಸದಸ್ಯ ಸಮಿತಿಯನ್ನು 25ರೊಳಗೆ ವರದಿ ನೀಡುವಂತೆ ಸೂಚಿಸಿದೆ. ಇದರ ಬೆನ್ನಲ್ಲೆ ರಾಷ್ಟ್ರೀಯ ವರಿಷ್ಠರು ಮಂಗಳವಾರ ದೆಹಲಿಗೆ ಬರುವಂತೆ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆ ವಿಪಕ್ಷನಾಯಕರಿಗೆ ಬುಲಾವ್ ನೀಡಿದೆ ಎಂದು ಹೇಳಲಾಗಿದೆ.
ಅಡ್ಡಮತದಾನದ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ವರಿಷ್ಠರು ರಾಜ್ಯ ಘಟಕದ ಮೇಲೆ ತೀವ್ರ ಅಸಮಾಧಾನ ಹೊಂದಿದ್ದಾರೆ.



