ದೊಡ್ಡಬಳ್ಳಾಪುರ: ಜಿಲ್ಲಾ ಸ್ವೀಪ್ ಸಮಿತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ, ದೊಡ್ಡಬಳ್ಳಾಪುರದ ವತಿಯಿಂದ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ಇವರ ಅಧ್ಯಕ್ಷತೆಯಲ್ಲಿ ಪ್ರೌಢಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳೊಂದಿಗೆ ಮತದಾನದ ಜಾಗೃತಿ ಜಾಥ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು.
ನಗರದ ವಿವಿಧ ಪ್ರೌಢಶಾಲೆಗಳು & ಪದವಿಪೂರ್ವ ಕಾಲೇಜುಗಳಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದವರೆಗೆ ಜಾಥಾ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದ ಸಂದರ್ಭದಲ್ಲಿ ಸ್ವೀಪ್ ಗೆ ಸಂಬಂಧಿಸಿದ ಫೋಸ್ಟರ್ ಗಳನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿಡುಗಡೆಗೊಳಿಸಿ ಮತದಾನದ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠಲ್ ಕಾವಳೆ, ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು ರವರು, ನಗರಸಭೆಯ ಪೌರಾಯುಕ್ತರಾದ ಶ್ರೀ ಪರಮೇಶ್ ರವರು, ಸಹಾಯಕ ನಿರ್ದೇಶಕರಾದ(ಪಂ.ರಾ) ಕುಮಾರ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರು,ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.