ಬೆಂಗಳೂರು: ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಅಧಿಕೃತವಾಗಿ ಪ್ರಕಟಗೊಂಡಿದೆ. ಇಂದಿನಿಂದಮ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭಗೊಂಡಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ, ಕೆ.ನಾರಾಯಣ್ ಅವರಿಂದ ತೆರವಾಗುವ ನಾಲ್ಕು ಸ್ಥಾನಗಳು ಹಾಗೂ ವಿಧಾನಪರಿಷತ್ನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ನಾಮಪತ್ರ ಸಲ್ಲಿಸಲು ಈ ತಿಂಗಳ 8 ಕಡೆಯ ದಿನವಾಗಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
9ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಜೂನ್ 18 ರಂದು ಚುನಾವಣೆ ನಡೆಯಲಿದೆ.
ಚುನಾವಣೆಯಲ್ಲಿ ಸ್ಫರ್ಧೆ ಮಾಡುವವರು ವಿಧಾನಸೌಧದಲ್ಲಿನ ರಾಜ್ಯಸಭಾ ಚುನಾವಣೆ ಚುನಾವಣಾಧಿಕಾರಿ, ವಿಧಾನಸಭೆಯ ಕಾರ್ಯದರ್ಶಿ.ಎಂ.ಕೆ. ವಿಶಾಲಾಕ್ಷಿ ಅವರ ಕೊಠಡಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದೆ.
ಜೂನ್ 11 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಖಾಲಿಯಾಗಲಿರುವ 4 ರಾಜ್ಯಸಭಾ ಸ್ಥಾನಕ್ಕೆ 4 ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದೇ ಆದರೆ ನಾಲ್ವರು ಸದಸ್ಯರನ್ನು ಚುನಾವಣೆ ಇಲ್ಲದೇ ಅವಿರೋಧವಾಗಿ ಆಯ್ಕೆ ಮಾಡಬಹುದು.
ಚುನಾವಣಾ ಅಧಿಸೂಚನೆ ರಾಜ್ಯಸಭೆ, ವಿಧಾನಪರಿಷತ್ ಪ್ರವೇಶಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ



