ಮುಳಬಾಗಿಲು: ರಾಜ್ಯದಲ್ಲೇ ಮೊದಲ ಬಾರಿಗೆ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರ ಸಂಘದ ಚುನಾವಣೆ ನಡೆಯದೆ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುವುದು ನನಗೆ ಸಂತಸ ತಂದಿದೆ ಎಂದು ಶಾಸಕ ಸಮೃದ್ಧಿ ವಿ ಮಂಜುನಾಥ್ ತಿಳಿಸಿದರು.
ತಾಲ್ಲೂಕಿನಲ್ಲಿ ಕಾಂತರಾಜ ಸರ್ಕಲ್ ಬಳಿ ಶಾಸಕರ ಗೃಹ ಕಚೇರಿಯಲ್ಲಿ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿ. ತಾಲ್ಲೂಕಿನಲ್ಲಿ ಶಿಕ್ಷಕರು ಒಗ್ಗಟ್ಟಾಗಿದ್ದು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಮಾಡಬೇಕು ಯಾವುದೇ ಕಾರಣಕ್ಕೂ ಚುನಾವಣೆ ನಡುಸುವುದು ಬೇಡ ಎಂದು ಶಿಕ್ಷಕರ 2 ಬಣಗಳಿಗೆ ಸೂಚಿಸಿದಾಗ ಅವರೆಲ್ಲರೂ ಇದಕ್ಕೆ ಸಂಬAಧಿಸಿದAತೆ ಅವಿರೋಧವಾಗಿ ಆಯ್ಕೆಯಾಗಲು ಸಾಧ್ಯವಾಗಿದೆ ಎಂದರು.
ಗಡಿ ಭಾಗದ ಮುಳಬಾಗಲು ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಈಗಾಗಲೇ ಹಲವು ಬಾರಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ತಿಳಿಸಿದರು. ತಾಲ್ಲೂಕಿನಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳ ಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಳುಹಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.
ಸರ್ಕಾರದಿAದ ಸಿಗುವ ಅನುದಾನಗಳನ್ನು ಬಿಡುಗಡೆ ಮಾಡಿಸಿ ಕಳೆದ ಮೂರು ವರ್ಷಗಳಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಸಿದ್ದೇನೆ ಇನ್ನು ಎರಡು ವರ್ಷಗಳಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುತ್ತೇನೆ. ಸಾರ್ವಜನಿಕರು ಯಾವುದೇ ಸಮಸ್ಯೆ ಇದ್ದರೂ ನನ್ನನ್ನು ಭೇಟಿಯಾಗಿ ಪರಿಹಾರ ಕಂಡುಕೊಳ್ಳಬಹುದು ಎಂದರು.
ಶಿಕ್ಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಅವರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿ ತಾಲ್ಲೂಕು ಮತ್ತು ಜಿಲ್ಲೆಗೆ ಒಳ್ಳೆಯ ಕೀರ್ತಿ ತರಬೇಕೆಂದು ಎಲ್ಲಾ ಶಿಕ್ಷಕರಲ್ಲಿ ಮನವಿ ಮಾಡಿದರು.
ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ ವಿ ಜಗನ್ನಾಥ್ ಮಾತನಾಡಿ. ಕಳೆದ 50 ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾಗಲು ಶಾಸಕರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ನಲ್ಲೂರು ರಘುಪತಿ ರೆಡ್ಡಿ. ಸರ್ಕಾರಿ ಯೂನಿಯನ್ ನಿರ್ದೇಶಕ ಬಂಡಹಳ್ಳಿ ಲಕ್ಷಿ÷್ಮÃನಾರಾಯಣ್. ಎಪಿಎಂಸಿ ಮಾಜಿ ನಿರ್ದೇಶಕ ಎನ್ ಆರ್ ಎಸ್ ಸತ್ಯಣ್ಣ. ಅನುದಾನಿತ ವಿದ್ಯಾಸಂಸ್ಥೆಗಳ
ನೌಕರ ಸಂಘದ ಜಿಲ್ಲಾ ಅಧ್ಯಕ್ಷ ಎಂ ನಾರಾಯಣಸ್ವಾಮಿ. ಸಂಘದ ಗೌರವಾಧ್ಯಕ್ಷ ಕೆ ಬಿ ನಾಗರಾಜ್. ಉಪಾಧ್ಯಕ್ಷ ಪಿವಿ ಉಷಾ. ಸಹ ಕಾರ್ಯದರ್ಶಿಗಳಾದ ಸಿ ಎಸ್ ನಿರಂಜನ್ ಕುಮಾರ್. ಎಸ್ ಕೆ ವಾಣಿ. ಖಜಾಂಚಿ ಎಂ ಸೋಮಶೇಖರ್. ಸಂಘಟನಾ ಕಾರ್ಯದರ್ಶಿಗಳಾದ ಬಿ ಎಸ್ ವೇಣುಗೋಪಾಲ್. ಕೆ ವಾಣಿ. ಕಾರ್ಯಕಾರಿ ಸಮಿತಿ ಸದಸ್ಯರಾದ ಕೆವಿ ನಾಗರಾಜ್. ಸುಬ್ರಮಣಿ. ಶಿಕ್ಷಕರಾದ ಚಂದ್ರಪ್ಪ. ರೆಡ್ಡಪ್ಪ. ವರದರಾಜು. ಸುಬ್ರಮಣಿ. ಫೈಜುಲ್. ಸುಬ್ರಮಣ ರೆಡ್ಡಿ. ಕಲಾವತಿ. ಹೇಮಾವತಿ ಮತ್ತಿತರರು ಹಾಜರಿದ್ದರು
`ರಾಜ್ಯದಲ್ಲೇ ಮೊದಲ ಬಾರಿಗೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರ ಸಂಘದ ಚುನಾವಣೆ’



