This is the title of the web page
This is the title of the web page

ನಾಳೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಪ್ರವೇಶ ನಿಷೇಧ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನ್ನು ಫೆಬ್ರವರಿ 9 ರಂದು ಒಂದು ದಿನಗಳ ಕಾಲ ಮುಚ್ಚಲಾಗುತ್ತಿದೆ. ಜಿ 20 ರಾಷ್ಟ್ರಗಳ ಪ್ರತಿನಿಧಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಒಂದು ದಿನ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಬೆಂಗಳೂರಿನಲ್ಲಿ ಫೆಬ್ರವರಿ 9 ರಿಂದ 11 ದಿನಗಳ ಕಾಲ ಸಭೆ ನಡೆಯಲಿದೆ.

ಸಭೆಯ ಭಾಗವಾಗಿ ಜಿ 20 ಸದಸ್ಯರು ಬೆಂಗಳೂರಿನ ವಿವಿಧ ಭಾಗಗಳಿಗೆ ಭೇಟಿ ನೀಡಲಿದ್ದಾರೆ. ಪ್ರೋಟೋಕಾಲ್ ಪ್ರಕಾರ ಬಿಬಿಪಿ, ಬಟರ್ ಫ್ಲೈ ಪಾರ್ಕ್ ಹಾಗೂ ಸಫಾರಿ ಪ್ರದೇಶವನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ.