ಬೆಂಗಳೂರು: ಮೇ 10ರಂದು ಮತದಾನ ಇರುವುದರಿಂದ ಅಂದು ವಿಶ್ವ ವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧ ಇದೆ. ಮತದಾನ ದಿನದಂದು ಬಹಳಷ್ಟುಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸುವುದನ್ನುಬಿಟ್ಟು ರಜಾ ಮಜಾ ಸವಿಯಲು ವಿವಾಸಿ ತಾಣಗಳಿಗೆ ಹೋಗುವ ಪರಿಪಾಠ ಬೆಳೆಸಿಕೊಂಡು ಬಂದಿದ್ದಾರೆ.
ಇದಕ್ಕೆ ಬ್ರೇಕ್ ಹಾಕುವ ಉದ್ದೇಶದಿಂದ ಚುನಾವಣೆ ದಿನದಂದು ಜೋಗ ಜಲಪಾತ ವೀಕ್ಷಣೆಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ನಿರ್ಬಂಧ ವಿಧಿಸಿದ್ದಾರೆ.ಮತದಾನದಿಂದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರದೆ ಇದ್ದರೆ ಬರುವ ಪ್ರವಾಸಿಗರಿಗಾಗಿ ನಿರ್ವಹಣಾ ಪ್ರಾಧಿಕಾರ ಸಿಬ್ಬಂದಿ ಕರ್ತವ್ಯಪಾಲನೆ ಮಾಡಬೇಕಾಗುತ್ತದೆ.
ಇವರಿಗೆ ಪೂರಕವಾಗಿ ಸ್ಥಳೀಯವಾಗಿರುವ ವ್ಯಾಪಾರಸ್ಥರು, ಛಾಯಚಿತ್ರಗಾರರು, ಬೀದಿ ಬದಿ ವ್ಯಾಪಾರಿಗಳು, ಗೈಡ್‍ಗಳು, ಆಟೋಚಾಲಕರು, ಟ್ಯಾಕ್ಸಿ ಚಾಲಕರು ಭದ್ರತಾ ಸಿಬ್ಬಂದಿ ಸೇರಿದಂತೆ ಅನೇಕರು ಮತದಾನದಿಂದ ಹೊರಗುಳಿಯುವ ಸಾಧ್ಯತೆ ಇದೆ. ಈ ಹಿಂದೆ ಮತದಾನ ದಿನಗಳಂದು ಜೋಗ ನಿರ್ವಹಣಾ ಪ್ರಾಧಿಕಾರದಲ್ಲಿ ದಾಖಲಾದ ಪ್ರವಾಸಿಗರ ಸಂಖ್ಯೆ ಅಂಕಿ ಅಂಶಗಳನ್ನು ಪರಿಗಣಿಸಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Leave a Review