ಶಿವಮೊಗ್ಗ: ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಲು ತಮ್ಮ ಪುತ್ರನಿಗೆ ಟಿಕೆಟ್ ದೊರೆಯದೇ ಇರುವುದರಿಂದ ಬಿಜೆಪಿ ಹಿರಿಯ ಮುಖಂಡ ಮಾಜಿ ಉಪಮುಖ್ಯಮಂತ್ರಿ ಕೆಎಸ್. ಈಶ್ವರಪ್ಪ ಅಸಮಾಧಾನಗೊಂಡಿದ್ದು, ಇಂದು ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಲಿದ್ದಾರೆ.
ಸಂಜೆ 5 ಗಂಟೆಗೆ ಈಶ್ವರಪ್ಪ ಬೆಂಬಲಿಗರೊಂದಿಗೆ ಸಭೆ ನಡೆಸಲಿದ್ದು, ಸಭೆಯಲ್ಲಿ ಯಾವ ತೀರ್ಮಾನಕೈಗೊಳ್ಳಲ್ಲಾಗುತ್ತದೆ ಎಂಬುದು ಇದೀಗ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಒಂದು ಹಂತದಲ್ಲಿ ತಮ್ಮ ಮಗನಿಗೆ ಟಿಕೆಟ್ ತಪ್ಪಲು ಯಡಿಯೂರಪ್ಪ ಅವರೇ ಕಾರಣ ಎಂದು ದೂರುತ್ತಿರುವ ಈಶ್ವರಪ್ಪ ಮತ್ತೊಂದೆಡೆ ದೇಶದಲ್ಲಿ ಮತ್ತೊಮ್ಮೆಮೋದಿ ಪ್ರಧಾನಿಯಾಗಬೇಕು ಎಂದು ಹೇಳುತ್ತಿದ್ದಾರೆ.ತಮಗೆ ವರಿಷ್ಠರ ವತಿಯಿಂದ ಮಗನಿಗೆ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಲಾಗುತ್ತಿದೆ. ಇದನ್ನು ನಂಬುವ ಸ್ಥಿತಿಯಲ್ಲಿ ತಾವಿಲ್ಲ ಎಂದು ಹೇಳಿದ್ದಾರೆ.