ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಇಂದು ದಿಢೀರ್ ಎಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಕೆ.ಎಸ್.ಈಶ್ವರಪ್ಪ ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಇಂದು ಬೆಳಿಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನನಿಲ್ದಾಣದಿಂದ ದೆಹಲಿಗೆ ತೆರಳಿರುವ ಈಶ್ವರಪ್ಪ ಅವರು ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
2024 ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಶ್ವರಪ್ಪ ದೆಹಲಿ ಭೇಟಿ ಕುತೂಹಲ ಮೂಡಿಸಿದೆ.ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕೆ.ಇ.ಕಾಂತೇಶ್ಗೆ ಸ್ಪರ್ಧೆಗೆ ಪಕ್ಷದ ಟಿಕೆಟ್ ಕೊಡಿಸಲು ಈಶ್ವರಪ್ಪ ಕಸರತ್ತು ನಡೆಸಿದ್ದಾರೆ.ಈಗಾಗಲೇ ಹಲವು ಮುಖಂಡರು ಹಾವೇರಿ ಕ್ಷೇತ್ರದಿಂದ ಸ್ಪರ್ಧಾಕಣಕ್ಕಿಳಿಯಲು ಪ್ರಯತ್ನ ನಡೆಸಿದ್ದರೂ ಸಹ ಈಶ್ವರಪ್ಪ ತಮ್ಮ ಪುತ್ರನಿಗೆ ಅವಕಾಶ ಮಾಡಿಕೊಡಬೇಕು ಎಂದುವರಿಷ್ಠರ ಮೇಲೆ ಪ್ರಭಾವ ಬೀರಲು ಮುಂದಾಗಿದ್ದಾರೆ.
ಮಾಜಿ ಸಚಿವ ಬಿ.ಸಿ. ಪಾಟೀಲ್ ವಕೀಲ್ ಸಂದೀಪ್ ಪಾಟೀಲ್ ಎಂಬುವರು ಸಹ ಹಾವೇರಿ ಕ್ಷೇತ್ರದಿಂದ ಅಭ್ಯರ್ಥಿಯಾಗಲು ಯತ್ನ ನಡೆಸುತ್ತಿದ್ದು ತಮ್ಮ ಪುತ್ರನಿಗೆ ಟಿಕೆಟ್ ಬೇಕು ಎಂದು ವರಿಷ್ಠರ ಮುಂದೆ ಈಶ್ವರಪ್ಪ ಪಟ್ಟು ಹಿಡಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ